Tuesday, April 9, 2024

ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

ಬಂಟ್ವಾಳ: ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಲ್ಪಡುವ ಉಚಿತ ಸೈಕಲ್‌ನ್ನು ವಿತರಿಸಲಾಯಿತು.
ಬಂಟ್ವಾಳ ಪುರಸಭಾ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ ಅವರು ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿ, ಸರಕಾರಗಳು ನೀಡುವಂತಹ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವುದರ ಜೊತೆ ಸುಶಿಕ್ಷಿತರಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದರು.
ಶಿಕ್ಷಣ ಪಡೆದ ನಂತರ ವಿದ್ಯಾರ್ಥಿಗಳು, ಪೋಷಕರ ನಿರಂತರ ಶಾಲೆಯ ಸಂಪರ್ಕವನ್ನು ಇಟ್ಟುಕೊಳ್ಳುವುದರ ಮುಖಾಂತರ ಶಾಲೆಯ ಎಲ್ಲ ರೀತಿಯ ಅಭಿವೃದ್ಧಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ೮ನೇ ತರಗತಿಯ ೧೨೫ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಲ್ಪಡುವ ಉಚಿತ ಸೈಕಲ್‌ನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ವೇದಮೂರ್ತಿ ಎಂ. ಜನಾರ್ದನ್ ಭಟ್, ಮುಖ್ಯೋಪಾದ್ಯಾಯ ಭೋಜ, ಸಹಶಿಕ್ಷಕರಾದ ಅಜಿತ್ ಕುಮಾರ್, ಸುಧಾಕರ್ ಹಾಜರಿದ್ದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...