ವಿಟ್ಲ: ಪಡಿಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ, ಎಲ್‌ಕೆಜಿ- ಯುಕೆಜಿ ಮಕ್ಕಳ ಸಾಮೂಹಿಕ ಹುಟ್ಟು ಹಬ್ಬ, ೮ ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ ಮತ್ತು ಶಾಲಾ ಶಿಕ್ಷಕ ವೃಂದದಿಂಧ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ ನಡೆಯಿತು.
ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ ಪಂ ಸದಸ್ಯೆ ಜಯಶ್ರೀ ಕೋಡಂದೂರು, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಬಾಲಕೃಷ್ಣ ಕಾರಂತ, ಉಪಾಧ್ಯಕ್ಷೆ ರೇಖಾ, ವಿದಾಗಿರಿ ಶಿಕ್ಷಣ ಕೇಂದ್ರದ ಅಧ್ಯಕ್ಷ ಪ್ರಭಾಕರ ಶೆಟ್ಟಿ ದಂಬೆಕಾನ, ಗೌರವಾಧ್ಯಕ್ಷ ಲಿಂಗಪ್ಪ ಗೌಡ, ಉದ್ಯಮಿ ರಾಧಾಕೃಷ್ಣ ಚೆಲ್ಲಡ್ಕ, ಸ್ಯಾಕ್ಸೋಫೋನ್ ವಾದಕ ಡಾ. ಪಿ.ಕೆ ದಾಮೋದರ, ಗ್ರಾಮ ಪಂಚಾಯಿತಿ ಸದಸ್ಯೆ ದಿವ್ಯಾ ಶಾಲಾಭಿವೃದ್ಧಿ ಸಮಿತಿ ಸದಸ್ಯ ನರಸಿಂಹ ಬಲ್ಲಾಳ್ ಭಾಗವಹಿಸಿದ್ದರು.
ಮುಖ್ಯ ಶಿಕ್ಷಕಿ ಶಶಿಕಲಾ ಪ್ರಸ್ತಾವಿಸಿ ಸ್ವಾಗತಿಸಿದರು. ಸಹಶಿಕ್ಷಕಿ ಮಲ್ಲಿಕಾ ಕೆ ಎಸ್ ವಂದಿಸಿದರು. ಪುಷ್ಪಾವತಿ ಎಂ ನಿರೂಪಿಸಿದರು.