Saturday, April 6, 2024

ಬಸ್ಸು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿ ಮೃತ್ಯು

ಬಂಟ್ವಾಳ: ನ.18 ರಂದು ಕಲ್ಲಡ್ಕ ದಲ್ಲಿ ಪಾದಚಾರಿಗೆ ಸರಕಾರಿ ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರು ಸರಕಾರಿ ಆಸ್ಪತ್ರೆ ಗೆ ದಾಖಲಾಗಿದ್ದ ಗಾಯಾಳು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮಾಣಿ ಸಮೀಪದ ಬುಡೋಳಿ ನಿವಾಸಿ ಅಣ್ಣಿಪೂಜಾರಿ (65) ಮೃತಪಟ್ಟವರು.

ಕಲ್ಲಡ್ಕ ರಸ್ತೆ ಬದಿಯಲ್ಲಿ ನಿಂತಿದ್ದಾಗ ಸರಕಾರಿ ಬಸ್ ಡಿಕ್ಕಿಯಾಗಿದೆ. ಘಟನೆ ಯಲ್ಲಿ ಅಣ್ಣಿ ಪೂಜಾರಿ ಅವರಿಗೆ ಗಂಭೀರ ಗಾಯಗಳಾಗಿದೆ, ಕೂಡಲೇ ಅವರನ್ನು ಮಂಗಳೂರು ವೆನ್ಲಾಕ್ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅವರ ತಲೆಗೆ ಗಂಭೀರ ವಾದ ಗಾಯಗಳಾಗಿದ್ದ ಕಾರಣ ಅವರು ಚಿಕಿತ್ಸೆ ಫಲಕಾರೊಯಾಗದೆ ಇಂದು ಮುಂಜಾನೆ 5ಗಂಟೆಯ ವೇಳೆ ಮೃತಪಟ್ಟಿದ್ದಾರೆ.
ಬ್ಯಾಂಡ್ ಅಣ್ಣಿ ಪೂಜಾರಿ ಎಂದೇ ಚಿರಪರಿಚಿತ ರಾಗಿರುವ ಇವರು ಬ್ಯಾಂಡ್ ವೃತ್ತಿ ಮಾಡುತ್ತಿದ್ದರು. ಕೆಲ ವರ್ಷಗಳ ಹಿಂದೆ ಇವರ ಅವಿವಾಹಿತ ಮಗ ಉಮೇಶ್ ಕೂಡಾ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದರು. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More from the blog

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಗಂಭೀರ

ಬಂಟ್ವಾಳ: ಮುಂಜಾನೆ ವೇಳೆ ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಕೈಕಂಬ ಎಂಬಲ್ಲಿ ಬೈಕ್ ಒಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಹಾಗೂ ಸಹಸವಾರ ಇಬ್ಬರು ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ...

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...