ಬಂಟ್ವಾಳ: ಪಿಕಪ್ ಸ್ಕೂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳು ಸ್ಕೂಟರ್ ಸವಾರ ಇಂದು ನ.18 ರಂದು ಸೋಮವಾರ ಮಂಗಳೂರು ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಮೆಲ್ಕಾರ್ ಟ್ರಾಫಿಕ್ ಪೋಲೀಸರು ಮಾಹಿತಿ ನೀಡಿದ್ದಾರೆ.
ನರಿಕೊಂಬು ಗ್ರಾಮದ ಪಿತ್ತಿಲಗುಡ್ಡೆ ನಿವಾಸಿ ಯೂಸುಫ್ ಅವರ ಪುತ್ರ ಎಮ್ ಫಯಾದ್ (22) ಮೃತಪಟ್ಟ ಯುವಕ.
ಕಳೆದ ಎರಡು ದಿನಗಳ ಹಿಂದೆ ಪಾಣೆಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಗಂಭೀರ ವಾಗಿ ತಲೆಗೆ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತು.
ಪಾಣೆಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಫರಾದ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಇನ್ನೊಂದು ಸ್ಕೂಟರ್ ಗೆ ಡಿಕ್ಕಿಯಾಗಿದ್ದ, ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಂಪೂರ್ಣ ಡ್ಯಾಮೇಜ್ ಅಗತ್ತು.
ಘಟನೆಯಿಂದ ತಲೆಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದ ಫರಾದ್ ನನ್ನು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿತ್ತಾದರೂ ಅತ ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ .
ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.