ಬಂಟ್ವಾಳ: ತೆರಿಗೆ ಸಂಗ್ರಹದಲ್ಲಿ ವಿಶೇಷ ಸಾಧನೆ ಮಾಡಿರುವ ದ.ಕ.ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ನಿಟ್ಟಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ರಾಜ್ಯ ಸರ್ಕಾರದ ಹೆಚ್ಚಿನ ಆದ್ಯತೆ ನೀಡಲಿದ್ದು ಬಂಟ್ವಾಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಲು 45 ಕೋಟಿ ರೂ ಹೆಚ್ಚಿನ ಅನುದಾನ ನೀಡುತ್ತವೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಬಂಟ್ವಾಳ ತಾಲೂಕು ಪಂಚಾಯತ್ ಆಶ್ರಯದಲ್ಲಿ ದ.ಕ.ಜಿಲ್ಲೆಯ ಎಲ್ಲಾ ಗ್ರಾ.ಪಂ.ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳ ಚಿಂತನ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಪಂಚಾಯತ್ ಸದಸ್ಯರ ಪರವಾಗಿ ಸಚಿವರಿಗೆ ವಿವಿಧ ಬೇಡಿಕೆಗಳನ್ನು ಸಲ್ಲಿಸಿದರು.
.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಜಿ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ, ಕೃಷಿ ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಯು.ಪಿ.ಇಬ್ರಾಹಿಂ, ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪುತ್ತೂರು ತಾ.ಪಂ.ಅಧ್ಯಕ್ಷ. ರಾಧಾಕೃಷ್ಣ ಬೋರ್ಕರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ಸೆಲ್ವಮಣಿ, ಸಚಿವರ ವಿಶೇಷ ಅಧಿಕಾರಿ ಜಯರಾಮ, ತಹಶೀಲ್ದಾರ್ ರಶ್ಮಿ ಎಸ್.ಆರ್. ತಾ.ಪಂ.ಗಳ ಕಾರ್ಯನಿರ್ವಹಣಾಧಿಕಾರಿಗಳುವೇದಿಕೆಯಲ್ಲಿದ್ದರು.
ಯೋಜನಾ ನಿರ್ದೇಶಕ ಮಧುಕುಮಾರ್ ಸ್ವಾಗತಿಸಿದರು. ಬಂಟ್ವಾಳ ಇಓ ರಾಜಣ್ಣ ವಂದಿಸಿದರು. ರಾಮಚಂದ್ರ ರಾವ್ ಕಾರ್ಯಕ್ರಮ ನಿರ್ವಹಿಸಿದರು.