Saturday, April 6, 2024

ಶ್ರೀರಾಮ ಪದವಿ ಪೂರ್ವ ಕಾಲೇಜು, ಕಲ್ಲಡ್ಕ: ವಾರ್ಷಿಕ ಕ್ರೀಡಾಕೂಟ

ಕಲ್ಲಡ್ಕ : ಜೀವನದಲ್ಲಿ ಗೆಲುವು ಸಂತೋಷವನ್ನು ನೀಡಿದರೆ, ಸೋಲು ಧೈರ್ಯದಿಂದ ಮುನ್ನಡೆಯಲು ಹೇಳಿಕೊಡುತ್ತದೆ. ಇಂದಿನ ಯುವ ಸಮೂಹಕ್ಕೆ ಶಾರೀರಿಕ ದೃಢತೆ ಅವಶ್ಯಕವಾಗಿದ್ದು, ಬಲವಾದ ದೇಶವನ್ನು ನಿರ್ಮಿಸಲು ಸಹಕಾರಿ. ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಕ್ರೀಡಾ ಮನೋಭಾವವು ಅವಶ್ಯವಾಗಿದೆ ಎಂದು ವೆಂಕಟೇಶ್ವರ ಭಟ್ ಮುಳ್ಳುಂಜ, ನಿರ್ದೇಶಕರು, ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘ ಇವರು ಹೇಳಿದರು.


ಕಲ್ಲಡ್ಕ ಶ್ರೀರಾಮ ಪದವಿಪೂರ್ವ ವಿದ್ಯಾಲಯದ 2019-20ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರಭಾಕರ್ ಭಟ್, ಕಲ್ಲಡ್ಕ ಅಧ್ಯಕ್ಷರು ವಿವೇಕಾನಂದ ವಿದ್ಯಾವರ್ಧಕ ಸಂಘ, ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಗಳಾದ ಸತೀಶ್ ಭಟ್, ಶಿವಗಿರಿ, ಆಡಳಿತ ಮಂಡಳಿ ಸದಸ್ಯರಾದ ನಾಗೇಶ್, ವಿದ್ಯಾಭಾರತಿ ಕರ್ನಾಟಕ ಇದರ ಕಾರ್ಯದರ್ಶಿಗಳಾದ ಲೋಕಯ್ಯ ಡಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ವಸಂತ ಬಲ್ಲಾಳ್ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿದರು. ಕಾಲೇಜಿನ ಕ್ರೀಡಾ ಕಾರ್ಯದರ್ಶಿಯಾದ ಕೌಶಿಕ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ಸ್ವಾಗತಿಸಿದರು. ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಸಿಂಚನ ವಂದಿಸಿದರು. ಗಣಕಶಾಸ್ತ್ರ ಉಪನ್ಯಾಸಕಿಯಾದ ಚೈತನ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬುಧವಾರ ನಾಮಪತ್ರ ಸಲ್ಲಿಸಿದರು. ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್‌ ಸಮಾವೇಶ...