Saturday, April 6, 2024

ವಿಟ್ಲದಲ್ಲಿ ಸಾರ್ವಜನಿಕ ಆಕ್ಷೇಪ ಮಧ್ಯೆ ಮೊಬೈಲ್ ಟವರ್ ನಿರ್ಮಾಣ: ಪ.ಪಂ. ಸೂಚನೆಗೂ ಕಿವಿಗೊಡದ ಕಂಪೆನಿ

ವಿಟ್ಲ: ಖಾಸಗಿ ಶಾಲೆ ಹಾಗೂ ಜನವಸತಿ ಪ್ರದೇಶದಲ್ಲಿ ಖಾಸಗಿ ಕಂಪೆನಿಯ ಮೊಬೈಲ್ ಟವರ್ ನಿರ್ಮಾಣಗೊಳ್ಳುತ್ತಿದ್ದು, ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಹಾಗೂ ಸ್ಥಳೀಯರು ನಾನಾ ಇಲಾಖೆಗಳಿಗೆ ದೂರು ಸಲ್ಲಿಸಿದ್ದು, ಪಟ್ಟಣ ಪಂಚಾಯಿತಿ ಅನುಮತಿ ಪಡೆಯದೇ ಗುತ್ತಿಗೆದಾರರು ಟವರ್ ನಿರ್ಮಾಣ ಮಾಡುತ್ತಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.
ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿ ಕಳೆದ ಕೆಲವು ತಿಂಗಳುಗಳಿಂದ ಏರ್‌ಟೆಲ್ ಕಂಪೆನಿಗೆ ಸೇರಿದ ಮೊಬೈಲ್ ಟವರ್ ನಿರ್ಮಾಣದ ಕಾಮಗಾರಿ ನಡೆಯುತ್ತಿದೆ. ಅದರ ಪಕ್ಕದಲ್ಲಿ ಹೊರೈಝನ್ ಪಬ್ಲಿಕ್ ಸ್ಕೂಲ್ ಹಾಗೂ ಸುತ್ತಮುತ್ತ ಕೆಲವಾರು ಮನೆಗಳಿವೆ. ಇಲ್ಲಿ ಟವರ್ ನಿರ್ಮಾಣಗೊಂಡರೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತದೆ ಎಂದು ಶಾಲಾ ಮುಖ್ಯ ಶಿಕ್ಷಕರು ಆರೋಗ್ಯ ಇಲಾಖೆಗೆ, ಪೊಲೀಸ್ ಠಾಣೆಗೆ, ಹಾಗೂ ವಿಟ್ಲ ಪಟ್ಟಣ ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಅವರೊಂದಿಗೆ ಸ್ಥಳೀಯ ಮನೆಯವರು ಕೂಡಾ ಮನವಿ ಸಲ್ಲಿಸಿದ್ದರು. ಅದಲ್ಲದೇ ಇಲ್ಲಿ ಮೊಬೈಲ್ ನಿರ್ಮಾಣಗೊಂಡರೆ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸಹ ಸ್ಥಳ ಪರಿಶೀಲನೆ ನಡೆಸಿ, ವರದಿ ಸಲ್ಲಿಸಿದ್ದರು. ಈ ಬಗ್ಗೆ ವಿಟ್ಲ ಪಟ್ಟಣ ಪಂಚಾಯಿತಿ ಕೂಡಾ ಟವರ್ ನಿರ್ಮಾಣ ಮಾಡಲು ಅನುಮತಿ ಕೂಡ ನೀಡಿಲ್ಲ. ಇಲ್ಲಿ ಟವರ್ ನಿರ್ಮಾಣ ಮಾಡಲು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಬೆಂಗಳೂರು ಇಂಡಸ್ ಟವರ್‍ಸ್ ಲಿಮಿಟೆಡ್ ಕಂಪೆನಿಗೆ ಪಟ್ಟಣ ಪಂಚಾಯಿತಿ ಸ್ಪಷ್ಟಪಡಿಸಿತ್ತು. ಆದರೆ ಕಂಪೆನಿ ಮಾತ್ರ ಜಾಣ ಕಿವುಡುತನ ತೋರಿಸಿದ್ದು, ಎಗ್ಗಿಲ್ಲದೇ ಟವರ್ ನಿರ್ಮಾಣದ ಕಾಮಗಾರಿಯನ್ನು ನಡೆಸುತ್ತಿದೆ ಎಂದು ಶಾಲಾ ಆಡಳಿತ ಮಂಡಳಿ ವ್ಯವಸ್ಥಾಪಕ ವಿಕೆಎಂ ಅಶ್ರಪ್ ಆರೋಪಿಸಿದ್ದು, ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...