ಒಡಿಯೂರು : ಶಾಲೆಗಳ ಮೂಲಕ ರಾಷ್ಟ್ರ ಕಟ್ಟುವ ಕಾಯಕ ನಡೆಯಬೇಕು. ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಇಂದಿನ ಅಗತ್ಯವಾಗಿದೆ. ಮಕ್ಕಳನ್ನು ಬೆಳೆಸುವಲ್ಲಿ ನಾವು ಎಡವದೇ ಜಾಗರೂಕರಾಗಿರಬೇಕು. ಭಾಷೆಯ ಬಗ್ಗೆ ಅಭಿಮಾನ ಮೂಡಿಸುವುದರೊಂದಿಗೆ ಭಾರತೀಯ ಸಂಸ್ಕೃತಿಯ ಬಗ್ಗೆ ಅರಿವನ್ನು ಮೂಡಿಸುವ ಕೆಲಸವನ್ನು ನಾವು ಮಾಡಬೇಕು. ಹೆತ್ತವರು ಕ್ರೀಯಾಶೀಲರಾಗಿದ್ದರೆ ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ತುಂಬಿ ಸತ್ಪ್ರಜೆಗಳನ್ನಾಗಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಒಡಿಯೂರು ಶ್ರೀ ಗುರುದೇವ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಶ್ರೀ ಸಂಸ್ಥಾನದ ಸಾಧ್ವಿ ಶ್ರೀ ಮಾತಾನಂದಮಯಿಯವರು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅ.ಖ.P. ಚಂದ್ರಶೇಖರ್, ನ್ಯಾಯವಾದಿ ಖಣಟಿ. ಜಯರಾಮ ರೈ, ಹಿರಿಯ ಪತ್ರಕರ್ತರಾದ ಯಶವಂತ ವಿಟ್ಲ, ಕ್ಷೇತ್ರದ ಕಾರ್ಯನಿರ್ವಾಹಕರಾದ ಪದ್ಮನಾಭ ಒಡಿಯೂರು, ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯ ಯೋಜನಾ ನಿರ್ದೇಶಕರಾದ ಕಿರಣ್ ರೈ, ಒಡಿಯೂರು ಶ್ರೀ ಸಹಕಾರಿ ಸೌಹಾರ್ದ ನಿಯಮಿತ ನಿರ್ದೇಶಕರಾದ ತಾರನಾಥ ಶೆಟ್ಟಿ ಒಡಿಯೂರು, ಒಡಿಯೂರು ಶ್ರೀ ವಜ್ರಮಾತ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ ಶೆಟ್ಟಿ, ಮಾತೃಮಂಡಳಿಯ ಸಂಚಾಲಕಿ ಹರಿಣಾಕ್ಷಿ ಪಿ. ಪಕಳ, ಉಪ ಸಂಚಾಲಕಿ ಲತಾದೇವಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಿಕೆ ’ಗುರುದೇವ ಚಿಣ್ಣರ ಚಿಲುಮೆ’ಯ ಅನಾವರಣವನ್ನು ಪೂಜ್ಯ ಶ್ರೀಗಳವರು ನೆರವೇರಿಸಿದರು. ಸಂಚಿಕೆಯ ಬಗ್ಗೆ ಸಂಪಾದಕರಾದ ನಾರಾಯಣ ಮಣಿಯಾಣಿ ಅನಿಸಿಕೆ ವ್ಯಕ್ತಪಡಿಸಿದರು. ಶ್ರೀ ಗುರುದೇವ ಗುರುಕುಲ, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ಪ್ರದರ್ಶನಗೊಂಡವು.
ಶಾಲಾ ಸಂಚಾಕರಾದ ಸೇರಾಜೆ ಗಣಪತಿ ಭಟ್ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಜಯಪ್ರಕಾಶ ಶೆಟ್ಟಿ ಅವರು ವರದಿ ವಾಚಿಸಿದರು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಣುಕಾ ಎಸ್. ರೈ ವಂದಿಸಿದರು. ಸಹ ಶಿಕ್ಷಕಿ ನಿವೇದಿತಾ ಕಾರ್ಯಕ್ರಮ ನಿರೂಪಿಸಿದರು. ಅನಿತಾ, ನವಿತಾ, ಜ್ಯೋತಿ, ಉದಯ ಕುಮಾರ್ ರೈ, ವೇದಾವತಿ, ಗೀತಾ ಸಹಕರಿಸಿದರು.