Wednesday, April 10, 2024

ಬಿ.ಸಿ.ರೋಡ್ – ಪುಂಜಾಲಕಟ್ಟೆ ಹೆದ್ದಾರಿ ಚತುಷ್ಪತ ಕಾಮಗಾರಿ: ಕುಡಿಯುವ ನೀರಿನ ಪೈಪ್ ಗೆ ಹಾನಿ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿ ಚತುಷ್ಪತ ಕಾಮಗಾರಿಯ ಸಂದರ್ಭದಲ್ಲಿ ಕುಡಿಯುವ ನೀರಿನ ಪೈಪ್ ಗಳು ಒಡೆದುಹೋಗಿ ನೀರು ಪೋಲಾಗುತ್ತಿರುವ ದೃಶ್ಯ.
ಬಿ.ಸಿ.ರೋಡಿನ ಮುಖ್ಯ ವೃತ್ತದಿಂದ ಪುಂಜಾಲಕಟ್ಟೆ ಯವರೆಗೂ ಕಾಮಗಾರಿ ಅಲ್ಲಲ್ಲಿ ನಡೆಯುತ್ತಿದ್ದು, ಕಾಮಗಾರಿ ಯ ವೇಳೆ ಕುಡಿಯುವ ನೀರಿನ ಪೈಪ್ ಲೈನ್ ಗಳನ್ನು ಒಡೆದು ಹಾಕಲಾಗುತ್ತಿದ್ದಾರೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

 


ಪೈಪ್ ಲೈನ್ ಕಡಿದು ಹಾಕುವುದರಿಂದ ಈ ಭಾಗದ ಜನರಿಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟವರು ಇತ್ತ ಗಮನ ಹರಿಸಬೇಕಾಗಿದೆ ಎಂದು ಅವರು ಈ ಮೂಲಕ ತಿಳಿಸಿದ್ದಾರೆ.
ಪುರಸಭಾ ವ್ಯಾಪ್ತಿಯಲ್ಲಿ ನಿರಂತರವಾಗಿ ನೀರು ಪೋಲಾಗುತ್ತಿದ್ದು ಪುರಸಭಾ ಅಧಿಕಾರಿಗಳು ಕೂಡ ಇತ್ತ ಗಮನ ಹರಿಸಬೇಕಾಗಿದೆ ಎಂದು ಸಾರ್ವಜನಿರ ಆಗ್ರಹವಾಗಿದೆ.

ಬಿಸಿರೋಡ್ -ಪುಂಜಾಲಕಟ್ಟೆ ರಸ್ತೆ ಕಾಮಗಾರಿ
ಅಭಿವೃದ್ಧಿಗೆ ಸರ್ಕಾರವು 157 ಕೋ.ರೂ.ಗಳ ಅನುದಾನ ನೀಡಿದ್ದು, ಕಾಮಗಾರಿ ಭರದಿಂದ ಸಾಗಿದೆ. ಒಟ್ಟು 19.85 ಕಿ.ಮೀ.ಹೆದ್ದಾರಿಯು ಅಭಿವೃದ್ಧಿ ಗೊಳಲಿದ್ದು, ಇದರಲ್ಲಿ ಬಿ.ಸಿ.ರೋಡಿನಿಂದ ಸುಮಾರು 3.85 ಕಿ.ಮೀ.ಚತುಷ್ಪತಗೊಳ್ಳಲಿದೆ. ಈಗಾಗಲೇ ಕಾಮಗಾರಿ ಗುತ್ತಿಗೆ ನಿರ್ವಹಿಸುವ ಸಂಸ್ಥೆಗೆ ಕಾಮಗಾರಿ ಮುಗಿಸುವುದಕ್ಕೆ 18 ತಿಂಗಳ ಕಾಲಾವಕಾಶ ನೀಡಲಾಗಿದ್ದು, ಕಳೆದ ಡಿಸೆಂಬರ್ ನಲ್ಲಿ ಕಾಮಗಾರಿ ಆರಂಭಗೊಂಡಿದೆ.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...