Saturday, April 6, 2024

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ “ಪ್ರತಿಭಾಕಲರವ” ಸಮಾರೋಪ

ಬಂಟ್ವಾಳ:    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯನ್ನು ಬಂಟ್ವಾಳ ತಾಲೂಕಿನ ಶಿಕ್ಷಣ ಇಲಾಖೆ ಹಾಗೂ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆ ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಆಯೋಜನೆ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದೆ  ಎಂದು ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ  ಉಪಾಧ್ಯಕ್ಷ ರಾಮಕೃಷ್ಣ ಶಿರೂರು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ   ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಹಾಗೂ  ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ  ಇವರ ಸಹಯೋಗದಲ್ಲಿ ಬುಧವಾರ ಸಮಾಪನಗೊಂಡ  ಎರಡು ದಿನಗಳ ದ.ಕ‌ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ “ಪ್ರತಿಭಾಕಲರವ” ದ ಸಮಾರೋಪ ಸಮಾರಂಭದಲ್ಲಿ  ಅವರು ಮಾತನಾಡಿದರು.
ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ಜೆ.ಪ್ರಹ್ಲಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಪರ್ಧಾ ಕಾರ್ಯಕ್ರಮಗಳೆಲ್ಲವೂ ಮಕ್ಕಳ ಸಂಭ್ರಮದ ಭಾಗವಹಿಸುವಿಕೆಯೊಂದಿಗೆ ನಡೆದಿರುವುದು ನಮಗೂ ಖುಷಿ ಕೊಟ್ಟಿದೆ , ಇಂತಹಾ ಅತ್ಯುತ್ತಮ ಅವಕಾಶ ನೀಡಿರುವುದಕ್ಕೆ ಇಲಾಖೆಗೆ ಕೃತಜ್ಞತೆ ಸಲ್ಲಿಸಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಯವರು ಮಾತನಾಡಿ, ಇಲಾಖೆಯ ಕಾರ್ಯಕ್ರಮವನ್ನು ತಮ್ಮ ಮನೆಯ ಕಾರ್ಯಕ್ರಮ ಎಂಬಂತೆ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ  ಸಂಚಾಲಕರು ಮತ್ತು ಅವರ ತಂಡ ನಿರ್ವಹಿಸಿರುವುದು ನಮ್ಮೆಲ್ಲರಿಗೂ ಸ್ಪೂರ್ತಿ ಎಂದರು.
ತಾ.ಪಂ.ಸದಸ್ಯೆ ಮಂಜುಳಾ ಕುಶಲಪೆರಾಜೆ,  ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್,  ಮಾಣಿ ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್.ನಾಯ್ಕ್, ಕಾರ್ಯದರ್ಶಿ ನಾರಾಯಣ ಶೆಟ್ಟಿ ಕೊಂಬಿಲ, ಆಡಳಿತಾಧಿಕಾರಿ ಸಿ.ಶ್ರೀಧರ್,
ಸಮನ್ವಯಾಧಿಕಾರಿ ರಾಧಾಕೃಷ್ಣ ಭಟ್ ,
ವಿವಿಧ ಶಿಕ್ಷಕ-ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳಾದ ಚೆನ್ನಕೇಶವ,  ಜತ್ತಪ್ಪ ಗೌಡ,   ರಮಾನಂದ,  ಕಲ್ಲಡ್ಕ ಶಾಲಾ ಮುಖ್ಯಶಿಕ್ಷಕ ಎ.ಅಶ್ರಫ್, ಪ್ರವೀಣ್  ಮುರಳೀಕೃಷ್ಣ,  ಸಿ.ಆರ್.ಪಿ ಸತೀಶ್,
ಶ್  , ತಾಲೂಕು ನೋಡಲ್ ಅಧಿಕಾರಿ ಸುಶೀಲಾ , ಶಾಲಾ ಮುಖ್ಯ ಶಿಕ್ಷಕಿ ಗ್ರೇಸ್ ಪಿ ಸಲ್ದಾನ, ತಾಲೂಕಿನ ಎಲ್ಲಾ ಬಿಆರ್ ಪಿ, ಸಿಆರ್ ಪಿ ಹಾಗೂ ಶಿಕ್ಷಣ ಸಂಯೋಜಕರು  ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ‌ವಿ.ಶೆಟ್ಟಿ ಸ್ವಾಗತಿಸಿದರು.
ಜಿಲ್ಲಾ ನೋಡಲ್ ಅಧಿಕಾರಿ ಶೋಭಾ ಎನ್ ವಂದಿಸಿದರು. ಶಿಕ್ಷಕಿಯರಾದ ರಶ್ಮೀ ಫರ್ನಾಂಡೀಸ್, ಶೋಭಾ ಕಾರ್ಯಕ್ರಮ ನಿರ್ವಹಿಸಿದರು.
ಪ್ರೌಢಶಾಲಾ ವಿಭಾಗದ ಸಮಗ್ರ ಪ್ರಶಸ್ತಿ ಬಂಟ್ವಾಳ ತಾಲೂಕು ಪಡೆದುಕೊಂಡರೆ, ಪ್ರಾಥಮಿಕ ಶಾಲೆಯ ಹಿರಿಯ ವಿಭಾಗದಲ್ಲಿ ಪುತ್ತೂರು ಹಾಗೂ ಕಿರಿಯ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.
Attachments area

More from the blog

ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ

ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಕಚೇರಿ ಹಾಗೂ ತಾಲೂಕು ಸ್ವೀಪ್ ಸಮಿತಿಯಿಂದ ಗ್ರಾಮೀಣ ಪುನರ್ವಸತಿ ಕಾರ್ಯಕತರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ತಾಲೂಕು ಆಡಳಿತ ಸೌಧದಿಂದ ಹಮ್ಮಿಕೊಂಡ ಜಾಥಾ ಬಿ.ಸಿ.ರೋಡ್ ಖಾಸಗಿ ಬಸ್ ನಿಲ್ದಾಣ...

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ

ಭಾರತೀಯ ಜನತಾ ಪಾರ್ಟಿ ಸ್ಥಾಪನಾ ದಿನದ ಅಂಗವಾಗಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ಅವರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ದೇವಪ್ಪ ಪೂಜಾರಿ,ರವೀಶ್ ಶೆಟ್ಟಿ, ಡೊಂಬಯ...

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...