Saturday, April 6, 2024

ಒತ್ತಡಗಳ ಮಧ್ಯೆ ಪತ್ರಿಕೋದ್ಯಮ ವೌಲ್ಯ ಕಾಪಾಡುವುದೇ ಸವಾಲು: ಮೋಹನ್ ಆಳ್ವ

ಮಂಗಳೂರು: ಆಧುನಿಕ ಜೀವನದಲ್ಲಿ ವೃತ್ತಿ ಬದುಕಿನ ಒತ್ತಡಗಳ ಮಧ್ತೆ ಪತ್ರಿಕಾರಂಗದ ವೌಲ್ಯಗಳನ್ನು ಕಾಪಾಡುವುದೇ ಮಾಧ್ಯಮ, ಪತ್ರಕರ್ತರ ನಿಜವಾದ ಸವಾಲು ಎಂದು ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು.


ದ.ಕ. ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಆಯೋಜಿಸಲಾದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಳೆದ ನೂರು ವರ್ಷಗಳ ಅವಧಿಯಲ್ಲಿ ಮಾಧ್ಯಮದ ಬೆಳವಣಿಗೆ ವಿಸ್ತಾರವಾಗಿದೆ. ಪ್ರಸಕ್ತ ಕಾಲದಲ್ಲಿ ಹೂಡಿಕೆ ಸ್ಪರ್ಧೆಯ ನಡುವೆ ಮಾಧ್ಯಮಗಳ ಮೇಲೆ ನಿಯಂತ್ರಣ ಕಷ್ಟ ಸಾಧ್ಯ. ಮಾತ್ರವಲ್ಲದೆ ಮಾಧ್ಯಮಕ್ಕೆ ಪ್ರವೇಶಿಸುವ ಯುವ ಶಕ್ತಿಯು ಉತ್ಸಾಹದ ಭರದಲ್ಲಿ ಬರವಣಿಗೆಯ, ತಿಳುವಳಿಕೆಯ ಕೊರತೆ ಸಾಮಾನ್ಯ. ಬಹಳ ಜಾಗರೂಕತೆಯಿಂದ ಮುಂದೆ ಸಾಗಬೇಕಾಗಿದೆ. ಹಾಗೆಂದು ಋಣಾತ್ಮಕ ಚಿಂತನೆಯ ಅಗತ್ಯವಿಲ್ಲ. ಕಾಲವೇ ಎಲ್ಲವನ್ನೂ ನಿರ್ಧರಿಸುವುದರಿಂದ ಇಂತಹ ವ್ಯವಸ್ಥೆಯ ನಡುವೆಯೂ ಮಾಧ್ಯಮ ಯಾವುದರಲ್ಲೂ ರಾಜಿಯಾಗದೆ ವೌಲ್ಯವನ್ನು ಕಾಪಾಡಬೇಕಾಗಿದೆ ಎಂದರು.
ಸಂಘದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಭಾರತೀಯ ಕಾರ್ಯನಿರತರ ಪತ್ರಕರ್ತರ ಒಕ್ಕೂಟದ ಹೊಸದಿಲ್ಲಿಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, ಪತ್ರಿಕೋದ್ಯಮ ಇಲ್ಲದೆ ದೇಶವನ್ನು ಊಹಿಸಲು ಅಸಾಧ್ಯ. ಪತ್ರಕರ್ತನಾದವನಿಗೆ ಕೆಲಸದಲ್ಲಿ ನಿಷ್ಠೆ, ಬದ್ಧತೆಯಿರಬೇಕಾಗಿದ್ದು ಅದೇ ಪತ್ರಿಕಾ ಧರ್ಮದ ಒಳಮರ್ಮ. ಪತ್ರಿಕೋದ್ಯಮ ದಾರಿ ತಪ್ಪಿದರೆ ದೇಶ ಕುಲಗೆಟ್ಟು ಹೋಗಲಿದೆ ಎಂದರು.
ವೇದಿಕೆಯಲ್ಲಿ ಸಾಹಿತಿ, ಹಂಪಿ ವಿವಿಯ ವಿಶ್ರಾಂತ ಕುಲಪತಿ ಡಾ.ಬಿ.ಎ. ವಿವೇಕ ರೈ, ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮಂಜುನಾಥ ಭಂಡಾರಿ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ವಿಜಯ ಕೋಟ್ಯಾನ್ ಪಡು ಕಾರ್ಯಕ್ರಮ ನಿರೂಪಿಸಿದರು. ಆರ್.ಸಿ. ಭಟ್ ವಂದಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...