Wednesday, April 10, 2024

ನ.17: ಸಾಲೆತ್ತೂರು ವಲಯ ಬಂಟರ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ

ವಿಟ್ಲ: ಸಾಲೆತ್ತೂರು, ಕೊಳ್ನಾಡು, ವಿಟ್ಲಪಡ್ನೂರುಗಳನ್ನೊಳಗೊಂಡ ಸಾಲೆತ್ತೂರು ವಲಯದ ಬಂಟರ ಸಂಘದ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ, ಬೆಂಗಳೂರು ಬಂಟರ ಸಂಘ ಮತ್ತು ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇದರ ಸಹಯೋಗದೊಂದಿಗೆ ನ.17 ರಂದು ಸಾಲೆತ್ತೂರಿನ ಪಾಲ್ತಾಜೆ ಸಿರಿ ವಿದ್ಯಾಲಯದಲ್ಲಿ ಬಂಟರ ಕ್ರೀಡಾಕೂಟ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಲಿದೆ.
ನ.17ರಂದು ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಅಗರಿ ಶ್ರೀ ಧೂಮಾವತಿ ಬಂಟ ದೈವಗಳ ಕಾರ್ಯಕಾರಿ ಸಮಿತಿ ಅಧ್ಯಕ್ಷ ಅಗರಿ ಪಡೆಕುಂಜ ಜಗನ್ನಾಥ್ ನಾಯ್ಕ್ ಉದ್ಘಾಟಿಸಲಿದ್ದಾರೆ.
ಸಭಾಧ್ಯಕ್ಷತೆಯನ್ನು ಸಾಲೆತ್ತೂರು ವಲಯ ಬಂಟರ ಸಂಘ ಅಧ್ಯಕ್ಷ ದೇವಪ್ಪ ಶೇಖ ಪೀಲ್ಯಡ್ಕ ವಹಿಸಲಿದ್ದು, ಅತಿಥಿಗಳಾಗಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಬಂಟವಾಳ ಬಂಟರ ಸಂಘದ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರಿಗುತ್ತು, ಬಂಟರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿ ಸಂಚಾಲಕ ಜಯರಾಮ ಸಾಂತ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಜೊತೆ ಕಾರ್ಯದರ್ಶಿ ಸತೀಶ ಅಡಪ್ಪ ಸಂಕಬೈಲು, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ.ಅಪರೇಟಿವ್ ಸೊಸೈಟಿ ಅಧ್ಯಕ್ಷ ಜೈರಾಜ್ ಬಿ.ರೈ, ಬಂಟ್ವಾಳ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ ರಂಗೋಲಿ, ಬಂಟ್ವಾಳ ಮಹಿಳಾ ಬಂಟರ ಸಂಘದ ಉಪಾಧ್ಯಕ್ಷೆ ಪ್ರತಿಭಾ ರೈ, ಬಂಟರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸದಾನಂದ ಸುಲಾಯ ಬೆಂಗಳೂರು, ಕೊಳ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ವಿಟ್ಲಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ, ಕೊಳ್ನಾಡು ತಾ.ಪಂ. ಸದಸ್ಯರಾದ ಕುಲ್ಯಾರು ನಾರಾಯಣ ಶೆಟ್ಟಿ, ವಿಟ್ಲಪಡ್ನೂರು ತಾ.ಪಂ. ಸದಸ್ಯೆ ಶೋಭಾ ರೈ ಎರ್ಮೆನಿಲೆ ಅವರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕೊಳ್ನಾಡು_ಸಾಲೆತ್ತೂರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಉದಯ ಕುಮಾರ್ ರೈ ಅಗರಿಯವರಿಗೆ ಸನ್ಮಾನ ನಡೆಯಲಿದೆ.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...