Saturday, April 13, 2024

ವಗ್ಗ ಕುಲಾಲ ಸಂಘದ 15ನೇ ವಾರ್ಷಿಕ ಮಹಾಸಭೆ

ಬಂಟ್ವಾಳ:  ನಮ್ಮ ಹಿರಿಯರು ಶ್ರದ್ಧೆಯಿಂದ ಕಟ್ಟಿದ ಸಂಘವನ್ನು ಉಳಿಸಿ ಅಭಿವೃದ್ಧಿ ಪಡಿಸುವ ಮಹತ್ವದ ಜವಬ್ದಾರಿ ನಮ್ಮದಾಗಿದ್ದು ಅದನ್ನು ಅತ್ಯಂತ ಮುತುವರ್ಜಿಯಿಂದ ಮುಂದುವರಿಸಬೇಕು ಎಮದು ಸಮಾಜ ಸೇವಾ ಸಹಕಾರಿ ಬ್ಯಾಂಕಿನ ಮಹಾ ಪ್ರಭಂದಕ ಭೋಜ ಮೂಲ್ಯ ಹೇಳಿದರು.
ಅವರು ವಗ್ಗ ಕುಲಾಲ ಸಂಘದ ಶ್ರೀ ಸತ್ಯನಾರಾಯಣ ಪೂಜೇ ಹಾಗೂ 15ನೇ ವಾರ್ಷಿಕ ಮಹಾಸಭೆಯ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘದ ಅಧ್ಯಕ್ಷ ಜಯರಾಮ ಕುಲಾಲ ಉರುಡಾಯಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಸಂಘದ ಯುವವೇದಿಕೆ ಅಧ್ಯಕ್ಷ ಸುಕುಮಾರ ಬಂಟ್ವಾಳ, ಉದ್ಯಮಿ ಬೂಬ ಸಾಲ್ಯಾನ್ ಆಗಮಿಸಿದ್ದರು. ವನಿತಾ ಉಗ್ಗಬೇಟ್ಟು ಕಾರ್ಯಕ್ರಮ  ನಿರೂಪಿಸಿದರು. ಹರೀಶ ಜಾರಿಬೆಟ್ಟು ಪ್ರಾಸ್ತಾವಿಕ ಭಾಷಣ ಮಾಡಿದರು. ಯಶೋಧಾ ಜೇ ಬಂಗೇರ ಸ್ವಾಗತ ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯದರ್ಶಿ ಹರೀಶ ಕಾಡಬೆಟ್ಟು ವರದಿ ವಾಚಿಸಿದರು. ರೋಹಿತ ಅಗರ್ಡಬೈಲು ಧನ್ಯವಾದ ನೀಡಿದರು. ಈ ಸಂದರ್ಭ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯದಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು. ಮಧ್ಯಾಹ್ನದ ನಂತರ ಸದಸ್ಯರಿಗೆ ಮಣ್ಣಿನ ಕಲಾಕೃತಿ, ಬೇಂಕಿ ಇಲ್ಲದೆ ಅಡುಗೆ, ರಂಗೋಲಿ, ಸೂಜೀಗೆ ದಾರ ಹಾಕುವುದು, ಲಿಂಬೆ ಚಮಚ ಹಾಗೂ ಸಂಗೀತ ಕುರ್ಚಿ ಸ್ಪರ್ಧೆ ಆಯೋಜಿಸಲಾಯಿತು. ಮಕ್ಕಳಿಗೆ ಡ್ರಾಯಿಂಗ್ ಮತ್ತು ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...