Sunday, April 7, 2024

ಸಜಿಪನಡು ಗ್ರಾಮ ಉಳ್ಳಾಲ ತಾಲೂಕಿಗೆ ಸೇರ್ಪಡೆ ವಿರೋಧ: ಎಸ್ಡಿಪಿಐ ಸಜೀಪನಡು ಗ್ರಾಮ ಸಮಿತಿಯಿಂದ ಪ್ರತಿಭಟನಾ ಸಭೆ

ಬಂಟ್ವಾಳ, ನ. ೧೮: ಸಜಿಪನಡು ಗ್ರಾಮವನ್ನು ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಉಳ್ಳಾಲ ತಾಲೂಕಿಗೆ ಸೇರ್ಪಡೆ ವಿರೋಧ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಸಜಿಪನಡು ಗ್ರಾಮವನ್ನು ನಿರ್ಲಕ್ಷಿಸಿದ ಬಗ್ಗೆ ಎಸ್ಡಿಪಿಐ ಸಜೀಪನಡು ಗ್ರಾಮ ಸಮಿತಿ ವತಿಯಿಂದ ಸಜಿಪನಡು ಜಂಕ್ಷನ್‌ನಲ್ಲಿ ಸೋಮವಾರ ಪತಿಭಟನಾ ಸಭೆ ನಡೆಯಿತು.

ಸಜಿಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ನಾಸಿರ್ ಸಜಿಪ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಉಳ್ಳಾಲ ತಾಲೂಕು ರಚನೆಗೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಆದರೆ, ಸಜಿಪನಡು ಗ್ರಾಮವನ್ನು ಉಳ್ಳಾಲ ತಾಲೂಕಿಗೆ ಸೇರ್ಪಡೆ ನಮ್ಮ ವಿರೋಧವಿದೆ. ಸಜಿಪನಡು ಗ್ರಾಮಸ್ಥರಿಗೆ ಎಲ್ಲ ವಿಷಯಗಳಲ್ಲಿ ಬಂಟ್ವಾಳ ತಾಲೂಕು ಸೂಕ್ತವಾಗಿದ್ದಲ್ಲದೆ, ಕೇಂದ್ರ ಸ್ಥಾನವೂ ಆಗಿದೆ. ಈಗಾಗಲೇ ಬಂಟ್ವಾಳ ತಾಲೂಕು ಕಚೇರಿಯಲ್ಲಿ ದಾಖಲೆಗಳನ್ನು ತಿದ್ದುಪಡಿ ಮಾಡುವಲ್ಲಿ ಸಮಸ್ಯೆಗಳು ತಲೆದೋರಿದ್ದು ನೂತನವಾಗಿ ನಿರ್ಮಾಣಗೊಳ್ಳಲಿರುವ ತಾಲೂಕಿನಲ್ಲಿ ಮತ್ತಷ್ಟು ಸಮಸ್ಯೆ ಎದುರಾಗಲಿದೆ ಎಂದು ಹೇಳಿದರು.
ಎಸ್ಡಿಪಿಐ ದಕ್ಷಿಣ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್. ಮಾತನಾಡಿ, ಬಂಟ್ವಾಳ ತಾಲೂಕಿನ ಕೆಂದ್ರವಾದ ಬಿ.ಸಿ.ರೋಡ್ ಸಜಿಪನಡುವಿಬನಿಂದ ೧೦ ಕಿ.ಮೀ. ದೂರದಲ್ಲಿದೆ. ಆದರೆ, ನೂತನ ನಿರ್ಮಾಣವಾಗಲಿರುವ ಉಳ್ಳಾಲ ತಾಲೂಕಿಗೆ ಸುಮಾರು ೧೮ ಕಿ.ಮೀ. ಇದ್ದು, ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಲಿದ್ದು, ಹಣ ಮತ್ತು ಸಮಯ ಕೂಡಾ ವ್ಯರ್ಥ ಎಂದ ಅವರು, ಇದು ದ್ವೇಷ ರಾಜಕೀಯ ಎಂದು ಆರೋಪಿಸಿದರು
ಪ್ರತಿಭಟನೆಯಲ್ಲಿ ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಇಕ್ಬಾಲ್ ಐಎಂಆರ್, ಸಜಿಪನಡು ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಹಿಮನ್ ಎಸ್.ಎನ್, ಇಕ್ಬಾಲ್ ಬೈಲುಗುತ್ತು, ಅಬ್ದುಲ್ ರಶೀದ್, ಗ್ರಾಮ ಸಮಿತಿ ಅಧ್ಯಕ್ಷ ಮಹಮ್ಮದ್ ನವಾಝ್ ಹಾಜರಿದ್ದರು. ಸದಕತುಲ್ಲಾ ಸ್ವಾಗತಿಸಿ, ವಂದಿಸಿದರು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...