ಬಿ.ಸಿ.ರೋಡ್ : ಜೀವನದಲ್ಲಿ ಸೋಲು ಎದುರಾದರೆ ಕುಗ್ಗದೆ ಮುಂದುವರಿದು ಗೆಲ್ಲುವ ಪ್ರಯತ್ನ ಮಾಡಬೇಕು. ಎನ್.ಎಸ್.ಎಸ್. ಎನ್ನುವುದು ನಮಗೆ ಬದುಕಿನ ಪಾಠಗಳನ್ನು ಕಲಿಸುತ್ತದೆ. ವಿದ್ಯಾರ್ಥಿಗಳು ಅದನ್ನು ತಮ್ಮ ಜೀವನದಲ್ಲಿ ಅಳವಡಿಸುವುದರ ಮೂಲಕವಾಗಿ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಇದರಿಂದಾಗಿ ಸಮಾಜಕ್ಕೆ ತುಂಬಾ ಪ್ರಯೋಜನವಾಗುತ್ತದೆ ಎಂದು ಶ್ರೀ ವೆಂಕಟರಮಣ ಸ್ವಾಮಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಹೇಳಿದರು.
ಅವರು ಸರಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಎಸ್.ವಿ.ಎಸ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಎನ್.ಎಸ್.ಎಸ್ ವಿದ್ಯಾರ್ಥಿಯೊಬ್ಬನ ಸರ್ವತೋಮುಖ ಬೆಳವಣಿಗೆಗೆ ಕಾರಣವಾಗುತ್ತದೆ. ಬದುಕಿನಲ್ಲಿ ಎಲ್ಲವನ್ನೂ ಎದುರಿಸುವ ಮನೋಸ್ಥೈರ್ಯವನ್ನು ನೀಡುತ್ತದೆ ಎಂದರು.
ಸಮಾರಂಭವನ್ನು ತಾಲೂಕು ಪಂಚಾಂiiತ್ ಸದಸ್ಯೆ ಸ್ವಪ್ನಾ ವಿಶ್ವನಾಥ ಉದ್ಘಾಟಿಸಿದರು. ಶಿಬಿರಾಧಿಕಾರಿ ಡಾ. ಮಂಜುನಾಥ ಉಡುಪ ಕೆ. ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಸರಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ, ಮಣಿನಾಲ್ಕೂರು ಗ್ರಾಮ ಪಂಚಾಯತ್ ಸದಸ್ಯೆ ಗೀತಾ ಶ್ರೀಧರ ಪೂಜಾರಿ, ಮಣಿನಾಲ್ಕೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಧಾಕೃಷ್ಣ ಮಯ್ಯ, ಗೌರವಾಧ್ಯಕ್ಷ ಶಶಿಕಾಂತ್ ಶೆಟ್ಟಿ ಆರುಮುಡಿ, ಪುರುಷೋತ್ತಮ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯ ಧನಂಜಯ ಶೆಟ್ಟಿ ನಾಡಬೆಟ್ಟು, ನಾಣ್ಯಪ್ಪ ಪೂಜಾರಿ, ಸರಪಾಡಿ ಹಿ.ಪ್ರಾ. ಶಾಲೆ ಎಸ್‌ಡಿಎಂಸಿ ಅದ್ಯಕ್ಷ ಗೋಪಾಲ ಪೂಜಾರಿ, ದಂತ ವೈದ್ಯ ಬಾಲಚಂದ್ರ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯೆ ಪ್ರೇಮಾ ಆಗಮಿಸಿದ್ದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ನಾಯಕರಾದ ಹರ್ಷಿತ್, ಧನುಷ್,  ಗೌತಮಿ,  ದೀಕ್ಷಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಬಿರಾಧಿಕಾರಿ ಶಶಿಕಲಾ ಯಂ.ಪಿ. ಧನ್ಯವಾದ ನೀಡಿದರು. ಸಹಶಿಬಿರಾಧಿಕಾರಿಗಳಾದ ಉಪನ್ಯಾಸಕರಾದ ಕಿಟ್ಟು ರಾಮಕುಂಜ, ಕಾರ್ತಿಕ್, ಸುಪ್ರಿಯಾ ಬೆಂಡೆ,  ಸುಪ್ರಿಯಾ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here