ಬಂಟ್ವಾಳ: ನ.8 ರಂದು (ನಾಳೆ) ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆಯಲಿರುವ ಚಿಂತನ-ಮಂಥನ ಕಾರ್ಯಕ್ರಮ ಹಾಗೂ ಬಹುಗ್ರಾಮ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟನೆಯ ಕಾರ್ಯಕ್ರಮದ ಬಗ್ಗೆ ಪೂರ್ವತಯಾರಿ ಸಭೆ ತಾ.ಪಂ.ನ ಎಸ್.ಜಿ.ಎಸ್.ವೈ.ಸಭಾಂಗಣದಲ್ಲಿ ನಡೆಯಿತು.


ಸಚಿವ ಕೆ.ಎಸ್.ಈಶ್ವರಪ್ಪ ಅವರು ಈ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿದ್ದು ಯಾವ ರೀತಿಯಲ್ಲಿ ತಯಾರಿಗಳು ನಡೆಯಬೇಕಾಗಿದೆ ಎಂಬುದರ ಬಗ್ಗೆ ಪಿ.ಡಿ.ಒ ಗಳಿಗೆ ವಿಶೇಷ ಸಭೆ ನಡೆಸಲಾಯಿತು.
ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಜಿಲ್ಲಾ ಯೋಜನಾಧಿಕಾರಿ ಮಧುಕಿರಣ್, ತಾ.ಪಂ.ಇಒ ರಾಜಣ್ಣ ಉಪಸ್ಥಿತಿಯಲ್ಲಿ ಸಭೆ ನಡೆಯಿತು

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here