ಬಂಟ್ವಾಳ: 2018-19 ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ನ.20 ರಂದು ಬುಧವಾರ ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಪಂಚಾಯತ್ ಯೋಜನಾಧಿಕಾರಿಯವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ ಪ್ರಕಟನೆಯ ಲ್ಲಿ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಗಳ ಪರಿಣಾಮಕಾರಿ ಅನುಷ್ಟಾನ ಜನತೆಯ ಪಾಲ್ಗೋಳ್ಳುವಿಕೆಯನ್ನು ಖಾತರಿಪಡಿಸಿಕೊಳ್ಳುವುದು ಮತ್ತು ಪ್ರೋತ್ಸಾಹಿಸುವುದು, ಪಾರದರ್ಶಕತೆ ಒದಗಿಸುವುದು ಮತ್ತು ನಾಗರಿಕರಿಗೆ ಮಾಹಿತಿ ದೊರಕುವಂತೆ ಮಾಡುವುದು, ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ತಾಲೂಕು ಪಂಚಾಯತ್ ನ ಸ್ಪಂದನಶೀಲ ಆಡಳಿತವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2018-19 ನೇ ಸಾಲಿನಲ್ಲಿನ
ತಾಲೂಕು ಪಂಚಾಯತಿ ಮತ್ತು ವಿವಿಧ ಇಲಾಖೆಗಳಲ್ಲಿನ ಜಮಾ ಖರ್ಚಿನ ಬಗ್ಗೆ ಸಾರ್ವಜನಿಕರ ಸಮ್ಮುಖದಲ್ಲಿ ಜಮಾಬಂದಿಯನ್ನು ನಡೆಸಲಾಗುವುದು , ಸಾರ್ವಜನಿಕ ರು ಹೆಚ್ಚಿನ ಸಂಖ್ಯೆಯ ಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸವುಂತೆ ತಾ.ಪಂ.ನ.ಕಾರ್ಯನಿರ್ವಣಾಧಿಕಾರಿ ಇ.ಒ.ರಾಜಣ್ಣ ತಿಳಿಸಿದ್ದಾರೆ.