ವಿಟ್ಲ: ವಿಟ್ಲದ ವಿಠಲ ವಿದ್ಯಾ ಸಂಘದ ವಿಠಲ ಪ್ರೌಢಶಾಲೆಯಲ್ಲಿ ವಿಟ್ಲ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಹತ್ತನೇ ತರಗತಿ ಪರೀಕ್ಷಯಲ್ಲಿ ಶಾಲೆಗೇ ಪ್ರಥಮ ಸ್ಥಾನ ಗಳಿಸಿದ ಸುಚಿತ ಮತ್ತು ದ್ವಿತೀಯ ಸ್ಥಾನ ಗಳಿಸಿದ ಪ್ರಜ್ಞಾಶಂಕರಿ ಇವರನ್ನು ಸನ್ಮಾನಿಸಲಾಯಿತು.
ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ. ಕಾರ್ಯದರ್ಶಿ ಮನೋಜ್ ಕುಮಾರ್ ಸದಸ್ಯರುಗಳಾದ ರವಿಶಂಕರ್ ಮತ್ತು ಇಕ್ಬಾಲ್ ಹೋನೆಸ್ಟ್, ಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಸ್ವಾಗತಿಸಿದರು. ಮಹಾಬಲೇಶ್ವರ ಭಟ್ ವಂದಿಸಿದರು. ಮೋಹನ್ ನಿರೂಪಿಸಿದರು. ಸಿ.ಹೆಚ್ ಸುಬ್ರಹ್ಮಣ್ಯ ಭಟ್ ಸಹಕರಿಸಿದರು.