Saturday, April 20, 2024

’ಪಕ್ಷಿ ಮತ್ತು ಪತಂಗಗಳ ಉಳಿವಿಗೆ ಸಸ್ಯರಾಶಿಗಳು ಅತ್ಯವಶ್ಯಕ’

ವಿಟ್ಲ: ಸ್ವರ ಸಾಮ್ರಾಜ್ಯ ಪಕ್ಷಿಗಳ ಇಂಚರದಿಂದ, ಬಣ್ಣದ ವೈವಿಧ್ಯ ಪತಂಗಗಳಿಂದ ನಮ್ಮ ಪರಿಸರ ಕಂಗೊಳಿಸಬೇಕಾದರೆ ನಾವು ಸಸ್ಯರಾಶಿಗಳನ್ನು ಬೆಳೆಸಿ, ಉಳಿಸಬೇಕು. ಇಲ್ಲದೇ ಹೋದರೆ ಪಕ್ಷಿಗಳು ಅಳಿವಿನಂಚಿಗೆ ಸಾಗುವ ಸಾಧ್ಯತೆ ಇದೆ. ಎಲ್ಲರೂ ಗಿಡಗಳನ್ನು ನೆಟ್ಟು ಹೆಮ್ಮರವಾಗಿಸಿ ಪಕ್ಷಿಲೋಕ, ಪತಂಗ ಲೋಕದ ಉಳಿವಿಗೆ ಶ್ರಮಿಸುವ ಅವಶ್ಯಕತೆಯಿದೆ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿ ಹೇಳಿದರು.
ಅವರು ವಿಟ್ಲ ಒಕ್ಕೆತ್ತೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುಬ್ಬಚ್ಚಿ ಗೂಡು, ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ, ವಿದ್ಯಾರ್ಥಿಗಳಿಗೆ ಛಾಯಾಚಿತ್ರಗಳನ್ನು ತೋರಿಸಿ ಸಂವಾದ ನಡೆಸಿ, ಬೇಸಿಗೆ ಕಾಲದಲ್ಲಿ ನೀರಿಡುವ ಅಗತ್ಯತೆಗಳನ್ನು ವಿವರಿಸಿದರು.
ಶಾಲಾ ಮುಖ್ಯ ಶಿಕ್ಷಕ ಮುದರ ಬೈರ. ಎಸ್, ಶಾಲಾಭಿವೃಧ್ದಿ ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ಹಾರಿಶ್.ಸಿ.ಎಚ್. ಹಾಗೂ ಸಹ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಕ್ಷಿಗಳಿಗೆ ಮಣ್ಣಿನ ಪಾತ್ರೆಯಲ್ಲಿ ನೀರು ಮತ್ತುಆಹಾರ ಇಡುವ ವಿಧಾನವನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಲಾಯಿತು.

More from the blog

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...