Sunday, April 7, 2024

ವಾಲಿಬಾಲ್‌ನಲ್ಲಿ ಬಿ.ಆರ್.ಎಂ.ಪಿ.ಸಿ.ಪಿ ಶಾಲೆಗೆ ಸಮಗ್ರ ಪ್ರಶಸ್ತಿ

ಬಂಟ್ವಾಳ : ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಶಾಲೆಗಳ ಒಕ್ಕೂಟ(ಎ.ಐ.ಸಿ.ಎಸ್)ವು ಮಂಗಳೂರಿನ ಕಾರ್ಮೆಲ್ ಶಾಲೆಯಲ್ಲಿ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಮಗ್ರ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. 14ರ ವಯೋಮಿತಿಯ ಬಾಲಕರ ತಂಡ ಪ್ರಥಮ, ಬಾಲಕಿಯರ ತಂಡ ದ್ವಿತೀಯ ಮತ್ತು 17ರ ವಯೋಮಿತಿಯ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಚಾಂಪಿಯನ್ ತಂಡವಾಗಿ ಹೊರಹೊಮ್ಮಿದೆ. 8ನೇ ತರಗತಿಯ ಇಂಚರ ಶೆಟ್ಟಿ, ಸ್ವಯಂ ಎಸ್ ರೈ ಬೆಸ್ಟ್ ಪಾಸರ್ ಪ್ರಶಸ್ತಿ, ಕ್ರಿಸ್ ಜೊಸಿ ಬ್ಯಾಪ್ಟಿಸ್ಟ್ ಬೆಸ್ಟ್ ಸ್ಮ್ಯಾಷರ್ ಪ್ರಶಸ್ತಿ ಮತ್ತು 9ನೇ ತರಗತಿಯ ಆದ್ಯ ಬನ್ನಿಂತಾಯ ಆಲ್‌ರೌಂಡರ್ ಪ್ರಶಸ್ತಿ ಪಡೆದುಕೊಂಡರು. ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾಂಶುಪಾಲೆ ರಮಾಶಂಕರ್ ಸಿ ಅಭಿನಂದಿಸಿ ಶುಭಹಾರೈಸಿದ್ದಾರೆ. ದೈಹಿಕ ಶಿಕ್ಷಣ ತರಬೇತುದಾರೆ ಶ್ರುತಿಕಾ ಮತ್ತು ಚಿತ್ರಕಲಾ ಶಿಕ್ಷಕ ಹರೀಶ್ ಎಂ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...