ಉಪ್ಪಿನಂಗಡಿ: ಉಪ್ಪಿನಂಗಡಿಯ ಬೆದ್ರೋಡಿಯಲ್ಲಿ ಜೀಪು ಮತ್ತು ಕಂಟೈನರ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಘಟನೆ ರವಿವಾರ ಮುಂಜಾನೆ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಜೀಪು ಚಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಚಾಲಕನನ್ನು ನೆಲ್ಯಾಡಿ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಜೀಪು ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಚಾಲಕ ಮೃತಪಟ್ಟರು.ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.