Friday, April 5, 2024

ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ಮುಖ್ಯಸ್ಥ ರಮೇಶ್ ಕಲ್ಲಡ್ಕ ರಚಿಸಿದ ಭವ್ಯ ರಾಮಮಂದಿರದ ಕಲಾಕೃತಿ ಅನಾವರಗೊಳಿಸಿದ ಡಾ! ಪ್ರಭಾಕರ್ ಭಟ್

ಬಂಟ್ವಾಳ: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗಲಿದ್ದು, ದೇಶ, ವಿದೇಶಗಳಲ್ಲಿನ ಶ್ರದ್ಧಾಳುಗಳು ಹಾಗೂ ಪ್ರವಾಸಿಗರನ್ನು ಇದು ಸೆಳೆಯಲಿದೆ. ಸುಮಾರು 72 ಎಕರೆ ವಿಸ್ತಾರವಾದ ಜಾಗದಲ್ಲಿ ನಿರ್ಮಾಣಗೊಳ್ಳುವ ಮಂದಿರ ಭಾರತೀಯ ರಾಮಭಕ್ತರ ಶ್ರದ್ಧಾಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಆರ್.ಎಸ್.ಎಸ್. ಮುಖಂಡ, ರಾಮಮಂದಿರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ಮುಖ್ಯಸ್ಥ ರಮೇಶ್ ಕಲ್ಲಡ್ಕ ಅವರು ಫೈಬರ್ ನಲ್ಲಿ ರಚಿಸಿದ ಭವ್ಯ ರಾಮಮಂದಿರದ ಕಲಾಕೃತಿಯನ್ನು ಕಲ್ಲಡ್ಕದಲ್ಲಿ ಗುರುವಾರ ಸಂಜೆ ಅನಾವರಣಗೊಳಿಸಿ ಮಾತನಾಡಿದ ಡಾ. ಭಟ್, ರಾಮಮಂದಿರ ನಿರ್ಮಾಣವಾಗುವ ವಿಚಾರದಲ್ಲಿ ಎಲ್ಲ ಅಡೆತಡೆಗಳು ದೂರವಾದದ್ದು ಸಂತಸದ ವಿಚಾರ ಎಂದರು.
ಈ ಸಂದರ್ಭ ರಮೇಶ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಕಾಲೇಜು ಪ್ರಿನ್ಸಿಪಾಲ್ ಕೃಷ್ಣಪ್ರಸಾದ ಕಾಯರಕಟ್ಟೆ ಇದ್ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...