Sunday, April 7, 2024

ಡಿ.22 ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಡಿಜಿಟಲ್ ಪ್ರಿಂಟ್ ಎಕ್ಸ್ಪೋ

ಬಂಟ್ವಾಳ : ಬಂಟ್ವಾಳ ತಾಲೂಕು ಪ್ರಿಂಟರ್ಸ್ ಅಸೋಸಿಯೇಷನ್ ವತಿಯಿಂದ ಡಿಸೆಂಬರ್ 22ರಂದು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಡಿಜಿಟಲ್ ಎಕ್ಸ್‌ಪೋ ಕಾರ್ಯಕ್ರಮ ನಡೆಯಲಿದೆ. ಲೆಟರ್ ಪ್ರೆಸ್‌ನಿಂದ ಆರಂಭವಾಗಿ ಮುಂದೆ ಆಫ್‌ಸೆಟ್ ಮುದ್ರಣಕ್ಕೆ ತೆರೆದು ಪ್ರಸ್ತುತ ಡಿಜಿಟಲ್ ಯುಗಕ್ಕೆ ತೆರೆದುಕೊಂಡಿರುವ ಮುದ್ರಣ ರಂಗ ಬದಲಾವಣೆಯ ನಿಟ್ಟಿನಲ್ಲಿ ಮುಂದುವರಿಯುತ್ತಾ ಇದೆ. ಈ ಸಂದರ್ಭ ಮುದ್ರಣಕಾರರಿಗೆ ಮತ್ತು ಮುದ್ರಣ ರಂಗದಲ್ಲಿ ಆಸಕ್ತಿ ಇರುವರಿಗೆ ವಿವಿಧ ಶೈಲಿಯ ಡಿಜಿಟಲ್ ಯಂತ್ರಗಳ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯನ್ನು ಈ ಕಾರ್ಯಕ್ರಮದಲ್ಲಿ ನೀಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇದು ವಿನೂತನ ಕಾರ್ಯಕ್ರಮವಾಗಿದ್ದು ಈ ಕಾರ್ಯಕ್ರಮವನ್ನು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉದ್ಘಾಟಿಸಲಿದ್ದಾರೆ. ಎಕ್ಸ್ಪೋದಲ್ಲಿ ಕೆನಾನ್, ಕೊನಿಕಾ ಮಿನೋಲ್ಟಾ, ಎಚ್‌ಪಿ ಕಂಪೆನಿ, ಬ್ರದರ್, ಗೋದ್ರೆಜ್, ರೀಸೋ, ಡುಪ್ಲೋ ಕಂಪೆನಿಯ ಉತ್ಪನ್ನಗಳು, ಸೆಲ್ಕೋ ಕಂಪೆನಿಯ ಸೋಲಾರ್ ಜೆರಾಕ್ಸ್ ಹಾಗೂ ಸೋಲಾರ್ ಉತ್ಪನ್ನಗಳು ಪ್ರದರ್ಶನಗೊಳ್ಳಲಿದೆ. ಈ ಕಾರ್ಯಕ್ರಮದ ಸಹಯೋಗದಲ್ಲಿ ಶ್ರೀ ಮಾರುತಿ ಎಂಟರ್‌ಪ್ರೈಸಸ್ ಮೈಸೂರು, ಮಂಗಳೂರಿನ ಶ್ರೀ ಭಾರತಿ ಸಿಸ್ಟಮ್ಸ್, ಥೋನ್ಸೆ ಎಂಟರ್‌ಪ್ರೈಸಸ್, ಸೆಲ್ಕೋ ಸೋಲಾರ್ ಸಂಸ್ಥೆಗಳು, ಅನಿಲ್ ಕಂಪ್ಯೂಟರ್‍ಸ್ ವಹಿಸಲಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯ ಎಲ್ಲಾ ಮುದ್ರಣಾಕಾರರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆಯಬಹುದು ಹಾಗೂ ಮುದ್ರಣಾಲಯದ ಬಗ್ಗೆ ಆಸಕ್ತಿ ಇರುವ ಎಲ್ಲರಿಗೂ ಮುಕ್ತ ಪ್ರವೇಶವಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಈಶ್ವರ ಕುಮಾರ್ ಭಟ್ ಮತ್ತು ಕಾರ್ಯದರ್ಶಿ ಯಾದವ ಕುಲಾಲ್ ಬಿ.ಸಿ.ರೋಡು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...