ಬಂಟ್ವಾಳ: ಅಸಂವಿಧಾನಿಕ ಪೌರತ್ವ ಕಾಯ್ದೆಯ ವಿರುದ್ಧ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ವತಿಯಿಂದ ಡಿ. 17 ರಂದು (ನಾಳೆ) ಬೆಳ್ಳಿಗ್ಗೆ 10ಕ್ಕೆ ಬಿ.ಸಿ.ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಅವರು ಜಂಟಿಯಾಗಿ ಪತ್ರಿಕಾಪಕ್ರಟನೆಯಲ್ಲಿ ತಿಳಿಸಿದ್ದಾರೆ.
ಈ ಪ್ರತಿಭಟನಾ ಸಭೆಯಲ್ಲಿ ಮುಖ್ಯ ಭಾಷಣಾಕಾರರಾಗಿ ಸುಧೀರ್ ಕುಮಾರ್ ಕೊಪ್ಪ ಮಾತನಾಡಲಿದ್ದಾರೆ ಹಾಗೂ ಎಲ್ಲಾ ಕಾಂಗ್ರೇಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.