Tuesday, April 9, 2024

ಅನುಕಂಪ ಬೇಡ ಅವಕಾಶ ಕೊಡಿ : ವಸಂತ ಶೆಟ್ಟಿ

ಬಂಟ್ವಾಳ : ವಿಶೇಷ ಚೇತನಾ ಮಕ್ಕಳಿಗೆ ಅನುಕಂಪ ಮಾತ್ರ ತೋರಿಸಿದರೆ ಸಾಲದು. ಅವರ ಸರ್ವಾಂಗೀಣ ಬೆಳವಣಿಗೆಗೆ ವಿವಿಧ ಚಟುವಟಿಕೆಗಳ ಮೂಲಕ ಅವಕಾಶ ಮಾಡಿಕೊಡಬೇಕು. ಬಂಟ್ವಾಳ ಲಯನ್ಸ್ ಕ್ಲಬ್ ಮೂಲಕ ಉತ್ತಮ ಕಾರ್ಯ ನಡೆಸಿಕೊಮಡು ಬರುತ್ತಿದೆ ಎಂದು ಲಯನ್ಸ್ ಜಿಲ್ಲಾ ಉಪರಾಜ್ಯ ಪಾಲ ವಸಂತ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಬಿ.ಸಿ.ರೊಡಿನಲ್ಲಿ ಮಂಗಳವಾರ ಲಯನ್ಸ್ ವಿಶೇಷ ಚೇತನಾ ಮಕ್ಕಳ ಪಾಲನಾ ಕೇಂದ್ರ, ಲಯನ್ಸ್ ಫಿಸಿಯೋತೆರಫಿ ಕೇಂದ್ರ ಬಿ.ಸಿ.ರೋಡು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಮಂಗಳವಾರ ಲಯನ್ಸ್ ಸೇವಾ ಮಂದಿರ ಬಿ.ಸಿ.ರೋಡಿನಲ್ಲಿ ಏರ್ಪಡಿಸಲಾದ ವಿಶ್ವ ವಿಶೇಷ ಚೇತನರ ದಿನಾಚರಣೆ ಕಾಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಜ್ಞಾನೇಶ್ ಎಮ್.ಪಿ. ಮಾತನಾಡಿದರು. ವಿಶೆಷ ಚೇತನಾ ಮಕ್ಕಳ ಲಾಲನೆ ಪಾಲನೆ ಹೆತ್ತವರಿಗೆ ಕಷ್ಟವಾಗಿದ್ದು ಲಯನ್ಸ್ ಮಕ್ಕಳ ಪಾಲನಾ ಕೇಂದ್ರದ ಮೂಲಕ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಹಾಗೂ ತರಬೇತಿ ನೀಡುತ್ತಿರುವುದು ಶ್ಲಾಘನೀಯ ಎಂದರು.
ಲಯನ್ಸ್ ಸೇವಾ ಟ್ರಸ್ಟ್ ಇದರ ಅಧ್ಯಕ್ಷ ಡಾ.ಬಿ.ವಸಂತ ಬಾಳಿಗ ಅಧ್ಯಕ್ಷತೆ ವಹಿಸಿದ್ದರು. ಕಳೆದ ೧೦ ವರ್ಷಗಳಿಂದ ವಿಶೇಷ ಚೇತನಾ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ. ಲಯನ್ಸ್ ಸಂಸ್ಥೆಯ ಮೂಲಕ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಉಲ್ಲಾಸ್ ಐಸ್‌ಕ್ರೀಂ ಮಾಲಕ ಬಿ.ಹೆಚ್.ಉದಯ ಪೈ ಮೆಲ್ಕಾರ್,ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ರಾಧಾಕೃಷ್ಣ ಭಟ್, ಲಯನ್ಸ್ ಕ್ಲಬ್ ಕೋಶಾಧಿಕಾರಿ ದೇವಿಕಾ ದಾಮೋದರ್,ಕೇಂದ್ರ ಸಹ ಸಂಚಾಲಕ ಗಣೇಶ್ ಪಿ. ಉಪಸ್ಥಿತರಿದ್ದರು.
ಬಿ.ಚಿದಾನಂದ ಬಾಳಿಗ ಸ್ವಾಗತಿಸಿ, ದಾಮೋದರ ಮೆಲ್ಕಾರ್ ಕಾರ್ಯಕ್ರಮ ನಿರೂಪಿಸಿ,ತಾಲೂಕು ಸಮನ್ವಯ ಶಿಕ್ಷಣದ ಸಂಪನ್ಮೂಲ ವ್ಯಕ್ತಿ ರವೀಂದ್ರ ಕೆ. ವಂದಿಸಿದರು.
ಶಿಬಿರದಲ್ಲಿ ವಿಶೆಷ ಚೇತನಾ ಮಕ್ಕಳಿಗಾಗಿ ಛದ್ಮವೇಶ,ಸಾಮೂಹಿಕ ನೃತ್ಯ ಹಾಗೂ ಆಟೊಟಗಳನ್ನು ಏರ್ಪಡಿಸಲಾಗಿತ್ತು. ೧೭೦ಕ್ಕೂ ಮಿಕ್ಕಿ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...