ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇವರ ವತಿಯಿಂದ ಪ್ರಧಾನ ಮಂತ್ರಿ ಮಾತೃ ವಂದನಾ ಸಪ್ತಾಹದ ಉದ್ಘಾಟನೆ ಸಮಾರಂಭ ಬಿ.ಸಿ.ರೋಡಿನ ಎಸ್.ಜಿ.ವೈ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ್ದ ತಾ.ಪಂ‌. ಅಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ , ತಾಯಿ ಎಂಬ ಶಬ್ದವು ಅದು ಬಣ್ಣಿಸಲು ಅಸಾಧ್ಯವಾದುದು, ಹಾಗಾಗಿ ತಾಯಿಯ ಮಹತ್ವವನ್ನು ಅರಿತ ಇಲಾಖೆ , ಗರ್ಭಿಣಿ ಮಹಿಳೆಯರಿಗೆ ಆರೋಗ್ಯ ದ ಉದ್ದೇಶದಿಂದ ಹತ್ತು ಹಲವು ಯೋಜನೆ ಗಳನ್ನು ಕಾರ್ಯಗತಗೊಳಿಸಿದೆ. ಈ ಯೋಜನೆ ಗಳನ್ನು ಪ್ರತಿಯೊಬ್ಬ ಮಹಿಳೆಯರು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದರು.
ಕಾರ್ಯಕ್ರಮ ವನ್ನು ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾ ವಿ.ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾ.ಪಂ.ಕಾರ್ಯನಿರ್ವಣಾಧಿಕಾರಿ ರಾಜಣ್ಣ, ಉಪಸ್ಥಿತರಿದ್ದರು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಪ್ರಸ್ತಾವಿಕವಾಗಿ ಮಾತನಾಡಿದರು. ಸಿ.ಡಿ.ಪಿ.ಒ.ಶ್ರೀಲತಾ ಎಸ್.ಸ್ವಾಗತಿಸಿ, ಮೇಲ್ವಿಚಾರಕಿ ಸವಿತಾ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಭಾರತಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here