ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ವಿರುದ್ಧ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳು, ಕಿರುಕುಳಗಳು ಹೆಚ್ಚಾಗುತ್ತಿವೆ. ಆ ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡುವ ಕೆಲಸವಾಗುತ್ತದೆ.
ಯುವಜನತೆಯ ಮನಸ್ಥಿತಿ ಹಾಳಾಗಲು ಅಶ್ಲೀಲ ವೀಡಿಯೋ ವೀಕ್ಷಣೆ ಮುಖ್ಯ ಪಾತ್ರ ವಹಿಸುತ್ತದೆ. ಆದ್ದರಿಂದ ಅಶ್ಲೀಲ ಜಾಲತಾಣಗಳನ್ನು ಮತ್ತು ಆಶ್ಲೀಲ ಮಾಹಿತಿಗಳನ್ನೊಳಗೊಂಡ ವೆಬ್‍ಸೈಟುಗಳನ್ನು ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರು ಪ್ರಧಾನಿ ಮೋದಿಯವರಿಗೆ ಪತ್ರದ ಮೂಲಕ ಕೋರಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೆವರೆಂಡ್ ಫಾದರ್ ಡಾ.ತೋಮಸ್ ಕಳ್ಳಿಕಾಟ್ ವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.