Sunday, April 7, 2024

ಭಂಡಾರಿ ಸಮಾಜದ ಅಭಿವೃದ್ದಿಗೆ ಸಿಎಂ ಬಳಿ ನಿಯೋಗ ಶಾಸಕ ರಾಜೇಶ್ ನಾಯ್ಕ್ ಭರವಸೆ

ಬಂಟ್ವಾಳ : ಸಮಾಜದಲ್ಲಿ ಸೇನೆಯ ಮೂಲಕ ಉತ್ತಮ ಹೆಸರು ಮಾಡಿರುವ ಭಂಡಾರಿ ಸಮಾಜವು ಸಂಖ್ಯೆಯಲ್ಲಿ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಬಂಟ್ವಾಳ ಭಂಡಾರಿ ಸಮಾಜದ ಅಭಿವೃದ್ಧಿಯ ನಿಟ್ಟಿನಲ್ಲಿ ತಮ್ಮ ನಿಯೋಗವನ್ನು ಮುಖ್ಯಮಂತ್ರಿಗಳ ಬಳಿಗೆ ಕರೆದುಕೊಂಡು ಹೋಗುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭರವಸೆ ನೀಡಿದರು.
ಅವರು ಭಾನುವಾರ ಬಂಟ್ವಾಳದ ಅಜೆಕಲದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಂಟ್ವಾಳ ಭಂಡಾರಿ ಸಮಾಜ ಸಂಘದ ಸಭಾಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿದರು. ಜಾತಿ ಸಂಘಟನೆಗಳು ಸಮಾಜದ ಕಟ್ಟಕಡೇಯ ವ್ಯಕ್ತಿಗೂ ತಲುಪಿದಾಗಲೇ ಅದರ ಅಸ್ತಿತ್ವಕ್ಕೆ ಅರ್ಥ ಬರಲು ಸಾಧ್ಯ ಎಂದರು.
ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಸಾಮಾಜಿಕ ನ್ಯಾಯದಡಿಯಲ್ಲಿ ಇಂದು ಸಮಾಜದ ಪ್ರತಿಯೊಂದು ಸಮಾಜಗಳು ಮುಖ್ಯವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಭಂಡಾರಿ ಸಮಾಜವೂ ತನ್ನ ಅವಕಾಶಗಳನ್ನು ಬಳಸಿಕೊಂಡು ಸಾಕಷ್ಟು ಸಾಧನೆ ಮಾಡಿದೆ. ಈ ಸಮಾಜದ ಅಭಿವೃದ್ಧಿಗೆ ತನ್ನ ಸಹಕಾರವನ್ನೂ ನೀಡುತ್ತೇನೆ ಎಂದರು.
ಲೀಲಾವತಿ ಸದಾಶಿವ ಭಂಡಾರಿ ಹೊಸ್ಮಾರು ಅವರು ಸಭಾಭವನವನ್ನು ಉದ್ಘಾಟಿಸಿದರು. ಬೇಬಿ ಐಶಾನಿ ಅನೂಪ್‌ಕುಮಾರ್ ಮುಖ್ಯದ್ವಾರ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ದಿವಾಕರ ಶಂಭೂರು ಅವರು ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಮಂಗಳೂರು ಭಂಡಾರಿ ಸಂಘದ ಅಧ್ಯಕ್ಷ ರಘುವೀರ್ ಭಂಡಾರಿ ಕಾರ್ಕಳ,  ಭಂಡಾರಿ ಸಂಘದ ಅಧ್ಯಕ್ಷ ಶೇಖರ್ ಭಂಡಾರಿ, ಬಂಟ್ವಾಳ ಸಂಘದ ಗೌರವಾಧ್ಯಕ್ಷ ಬಾಬು ಭಂಡಾರಿ ಅಜೆಕಲ, ಮಾಜಿ ಅಧ್ಯಕ್ಷರಾದ ಕನ್ಯಾನ ಪೂವಪ್ಪ ಭಂಡಾರಿ, ಸುಂದರ ಭಂಡಾರಿ ರಾಯಿ, ಪುಷ್ಪಾ ಸಂಜೀವ ಭಂಡಾರಿ, ಪದ್ಮಾವತಿ ವಿಠಲ ಭಂಡಾರಿ, ಸಂಘದ ಕಾರ್ಯದರ್ಶಿ ಸದಾಶಿವ ನಂದೊಟ್ಟು, ಮಹಿಳಾ ಘಟಕದ ಅಧ್ಯಕ್ಷೆ ದಾಕ್ಷಾಯಿಣಿ ನಾಗೇಶ್, ಯುವ ವೇದಿಕೆ ಅಧ್ಯಕ್ಷ ಡಾ| ಪ್ರಶಾಂತ್ ಕಲ್ಲಡ್ಕ ಉಪಸ್ಥಿತರಿದ್ದರು.
ಸಂಘದ ಮಾಜಿ ಅಧ್ಯಕ್ಷ ನಾರಾಯಣ ಭಂಡಾರಿ ಬೊಟ್ಯಾಡಿ ಪ್ರಸ್ತಾವನೆಗೈದರು. ಶ್ರೀಕಾಂತ್ ಪಾಣೆಮಂಗಳೂರು ವಂದಿಸಿದರು. ದಿವ್ಯಾಲತಾ ಭಾಸ್ಕರ್ ಬಂಟ್ವಾಳ ಕಾರ್ಯಕ್ರಮ ನಿರ್ವಹಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...