Tuesday, April 9, 2024

ಮಕ್ಕಳ ದಿನಾಚರಣೆ ಅಂಗವಾಗಿ ಮುದ್ದು ಕಂದ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಫರ್‍ಸ್ ಅಸೋಸಿಯೇಷನ್ (ರಿ ) ಬೆಳ್ತಂಗಡಿ ವಲಯದ ವತಿಯಿಂದ ನಡೆದ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ತಾಲೂಕು ಮಟ್ಟದ ಮುದ್ದು ಕಂದ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾಯನಕೆರೆ ಛಾಯ ಭವನದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಗೌರವಾಧ್ಯಕ್ಷ ಎನ್ ಎ ಗೋಪಾಲ್ ಅಳದಂಗಡಿ, ಸೌತ್ ಕೆನರಾ ಫೋಟೊಗ್ರಾಪರ್ಸ ವಿವಿದೋದ್ದೇಶ ಸಹಕಾರ ಸಂಘ ದ ನಿರ್ದೇಶಕ ಕೆ ವಸಂತ್ ಶರ್ಮ ಉಜಿರೆ, ದ.ಕ., ಉಡುಪಿ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕಿರಣ್ ಕುಮಾರ್ ಅಳದಂಗಡಿ, ಜಿಲ್ಲಾ ಮಾಜಿ ಅಧ್ಯಕ್ಷ ವಿಲ್ಸನ್ ಜಾರ್ಜ್ ಗೊನ್ಸಾಲ್ವಿಸ್, ವಲಯದ ಪ್ರಧಾನ ಕಾರ್ಯದರ್ಶಿ ಗಂಗಾಧರ ಉಜಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಸ್ವಾಗತಿಸಿ, ಮಾಧ್ಯಮ ಪ್ರತಿನಿಧಿ ಮನು ಮದ್ದಡ್ಕ ಕಾರ್ಯಕ್ರಮ ನಿರೂಪಿಸಿದರು. ದಾಮೋದರ್ ಗುರುವಾಯನಕೆರೆ ವಂದಿಸಿದರು.

 

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...