Thursday, April 11, 2024

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಸಾಧ್ಯತೆ: ರಾಜ್ಯಾದ್ಯಂತ 3 ದಿನ ನಿಷೇಧಾಜ್ಞೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ 3 ದಿನಗಳ ಕಾಲ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಡಿಜಿಪಿ ನೀಲಮಣಿ ಎನ್. ರಾಜು ಮಾಹಿತಿ ನೀಡಿದ್ದಾರೆ.

ಬೆಳ್ಳಂಬೆಳಗ್ಗೆ ನಗರ ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಡಿಜಿಪಿ ನೀಲಮಣಿ ಎನ್. ರಾಜು ಭೇಟಿ ನೀಡಿದರು. ರಾಜ್ಯಾದ್ಯಂತ 3 ದಿನಗಳ ಕಾಲ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಡಿಜಿಪಿ ಮಾಹಿತಿ ನೀಡಿದ್ದಾರೆ. ಈ ವೇಳೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗದಂತೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಈಗಾಗಲೇ ಬೇರೆ ರಾಜ್ಯಗಳಲ್ಲಿ ಪೌರತ್ವ ಕಾಯ್ದೆ ವಿರುದ್ಧ ನಡೆಸಿದ ಹೋರಾಟ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ನಮ್ಮ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಆ ರೀತಿಯ ಹಿಂಸಾಚಾರ ನಡೆಯದಂತೆ ಮುಂಜಾಗ್ರತೆ ವಹಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುನ್ಸೂಚನೆ ನೀಡಿದ್ದಾರೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...