Saturday, April 6, 2024

ಡಿ. 29: ಒಡಿಯೂರಿನಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಒಡಿಯೂರು: ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ, ಬಂಟ್ವಾಳ ತಾಲೂಕು ಮತ್ತು ಕರೋಪಾಡಿ ಗ್ರಾಮ ಸಮಿತಿ ಹಾಗೂ ಘಟಸಮಿತಿ ಇವರ ನೇತೃತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ, ಮಂಗಳೂರು ಮತ್ತು ಸುಳ್ಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂಧತ್ವ ವಿಭಾಗ), ಡಾ.ಪಿ. ದಯಾನಂದ ಪೈ ಮತ್ತು ಪಿ. ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.) ಸೆಂಚುರಿ ಗ್ರೂಪ್ಸ್ ಬೆಂಗಳೂರು, ಎಸ್ಸಿಲೋರ್ ವಿಷನ್ ಫೌಂಡೇಶನ್, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ  ಡಿ. 29 ರಂದು ಆದಿತ್ಯವಾರ ಉಚಿತ ನೇತ್ರ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಆಯೋಜಿಸಲಾಗಿದೆ.
ಈ ಶಿಬಿರವನ್ನು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿ ಉದ್ಘಾಟಿಸಲಿದ್ದು, ಕಾರ್ಯಕ್ರಮದಲ್ಲಿ ಕರೋಪಾಡಿ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಬೇಬಿ ಆರ್. ಶೆಟ್ಟಿ, ಬೆಂಗಳೂರು ವಿಷನ್ ಫೌಂಡೇಶನ್‌ನ ಧರ್ಮಪ್ರಸಾದ್ ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಲ| ಎ. ಸುರೇಶ್ ರೈ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಯೋಜನಾ ನಿರ್ದೇಶಕ ಕಿರಣ್ ಉರ್ವ, ಯೋಜನೆಯ ಕರೋಪಾಡಿ ಗ್ರಾಮಸಮಿತಿಯ ಅಧ್ಯಕ್ಷ ರಘುನಾಥ ಶೆಟ್ಟಿ ಪಟ್ಲಗುತ್ತು ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು ಹಾಗೂ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುವುದು, ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಗೊತ್ತುಪಡಿಸಿದ ದಿನಾಂಕದಂದು ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಹಾಗೂ ಅರ್ಹರಿಗೆ ಉಚಿತ ಕನ್ನಡಕಗಳನ್ನು ನೀಡಲಾಗುವುದು.

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...