ಬಂಟ್ವಾಳ: ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಹೆಚ್ಚು ತೊಡಗಿಸಿಕೊಂಡಾಗ ಶಿಕ್ಷಣ ಪರಿಪೂರ್ಣವಾಗುತ್ತದೆ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಹೇಳಿದರು.
ಕಲ್ಲಡ್ಕದ ಸರ್ಕಾರಿ ಮಾದರಿ ಹಿ.ಪ್ರಾ.ಶಾಲೆಯ ವಾರ್ಷಿಕೋತ್ಸವ ಮತ್ರು ಪ್ರತಿಭಾ ಪುರಸ್ಕಾರ “ಉತ್ಸವ-2019” ಅನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸುತ್ತಿದ್ದು, ಪೋಷಕರೂ ಈ ಬಗ್ಗೆ ಗಮನಹರಿಸಬೇಕೆಂದು ಕರೆನೀಡಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಸರ್ವರ ಸಹಕಾರ ಕೋರಿದರು.
ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಅಲಿ ಮಾತನಾಡಿ, ಮಕ್ಕಳು ಸೃಜನಶೀಲತೆಯನ್ನು ಮೈಗೂಡಿಸಿಕೊಂಡು ಬೆಳೆಯುವಲ್ಲಿ ಸೂಕ್ತ ವಾತಾವರಣ ನಿರ್ಮಾಣದ ಜವಬ್ದಾರಿ ಪ್ರಜ್ಞಾವಂತ ಸಮಾಜದ್ದು ಎಂದರು.
ಸುರತ್ಕಲ್ ಮಾತಾ ಡೆವಲಪರ್ಸ್ ಸಂಸ್ಥೆಯ ಎಂ.ಡಿ. ಸಂತೋಷ್ ಕುಮಾರ್ ಅರೆಬೆಟ್ಟು ರವರು ಮಾತನಾಡಿ, ಸರ್ಕಾರಿ ಶಾಲೆಗಳನ್ನು ಸೂಕ್ತ ಮೂಲಭೂತ ಸೌಕರ್ಯಗಳ ಜೊತೆಗೆ ಹೆಚ್ಚು ಆಕರ್ಷಣೀಯ ಗೊಳಿಸುವುದರ ಮೂಲಕ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿ ಸರ್ಕಾರಿ ಶಾಲೆಗಳನ್ನು ಉಳಿಸುವ ಕಾರ್ಯ ಆಗಬೇಕಿದೆ ಎಂದರು.
ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಅಧ್ಯಕ್ಷ ನಾಗೇಶ್ ಕೆ ಯವರು ಮಾತನಾಡಿ, ಶತಮಾನೋತ್ತರ ಬೆಳ್ಳಿಹಬ್ಬದ ಅಂಗವಾಗಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು,ಹಿರಿಯ ವಿದ್ಯಾರ್ಥಿಗಳು ಹಾಗೂ ಪೋಷಕರ ಸಹಕಾರ ಅಗತ್ಯವಿದೆ ಎಂದರು.
ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯೆ ಶ್ರೀಮತಿ ಆಯಿಷಾ,
ಶತಮಾನೋತ್ತರ ಬೆಳ್ಳಿಹಬ್ಬ ಸಮಿತಿ ಉಪಾಧ್ಯಕ್ಷ ಅಬೂಬಕರ್, ಶಿವಶಂಕರ್, ಸಂಘಟನಾ ಕಾರ್ಯದರ್ಶಿ ಸಲೀಂ, ಸಾಂಸ್ಕೃತಿಕ ಕಾರ್ಯದರ್ಶಿ ಚಿ.ರಮೇಶ್ ಕಲ್ಲಡ್ಕ,
ಶಾಲಾ ನಾಯಕ ಈಶನ್, ಹಿರಿಯ ವಿದ್ಯಾರ್ಥಿ ಶಿವರಾಮ ಹೊಳ್ಳ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಯತಿನ್ ಕುಮಾರ್, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಾಲೆಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರಾದ ಕಸ್ತೂರಿ.ಪಿ, ಗಾಯತ್ರಿದೇವಿ, ರೇಷ್ಮಾಲೂಯಿಸ್, ಲವೀನಾಪ್ರಮೀಳಾ ಮಾರ್ಟೀಸ್ ರವರನ್ನು ಸನ್ಮಾನಿಸಲಾಯಿತು. ಶಾಲಾ ಮುಖ್ಯಶಿಕ್ಷಕ ಅಬೂಬಕರ್ ಅಶ್ರಫ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ವಾರಿಜಾಕ್ಷಿ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಆಯಿಷತ್ ಶಫಾನಾ,ಫಾತಿಮಾ ಇಸ್ಮಾ, ಆಯಿಷತ್ ಸಫೀನಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸಂಗೀತಾ ಸಹಕರಿಸಿದರು.