ಕರ್ನಾಟಕ:ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಫೋಷಣೆಯಾಗಿದೆ. ಮೂರು ದಿನಗಳ ಹಿಂದೆ ಡಿಸೆಂಬರ್ ೫ನೇ ತಾರೀಕಿನಂದು ನಡೆದಿದ್ದ ವಿಧಾನಸಭಾ ಉಪಚುನಾವಣೆ ಫಲಿತಾಂಶವೂ ಬಿಜೆಪಿ ಸರ್ಕಾರಕ್ಕೆ ಅಳಿವು ಉಳಿವಿನ ಪ್ರಶ್ನೆಯಾಗಿತ್ತು. ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣೇಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್.ಪೇಟೆ, ಹುಣಸೂರು ಕ್ಷೇತ್ರಗಳಲ್ಲಿ ಮತದಾನವಾಗಿತ್ತು. ಬಿಗಿ ಪೊಲೀಸ್ ಭದ್ರತೆ ನಡುವೆ ಮತ ಎಣಿಕೆ ಕಾರ್ಯ ನಡೆದಿದ್ದು, ಈಗಾಗಲೇ ಮತ ಎಣಿಕೆ ಫಲಿತಾಂಶ ಪ್ರಕಟವಾಗಿದೆ. , ಬಿಜೆಪಿ-ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿದಂತೆ ಇತರೆ 165 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 12 ಕ್ಷೇತ್ರಗಳಲ್ಲಿ ಬಿಜೆಪಿ ಬಹುಮತ ಸಾಧಿಸಿದ್ದು, ಕಾಂಗ್ರೇಸ್ ಗೆ 2, ಜೆಡಿಸ್ 0 ಹಾಗೂ ಇತರೆ- 1 ಗೆದ್ದುಕೊಂಡಿದೆ.