ಬಂಟ್ವಾಳ: ಸಮಾಜಕ್ಕೆ ಶಕ್ತಿ ತುಂಬುವ ಸಂಘಟನೆಯನ್ನು ಬಲಪಡಿಸುವ ಮೂಲಕ ನಮ್ಮ ಸಮಾಜವು ಸ್ವಾಮೀಜಿಗಳ ನೇತೃತ್ವದಲ್ಲಿ ಮುಂದುವರಿದರೆ ಅಭಿವೃದ್ಧಿ ಸಾಧ್ಯ. ಬಿಲ್ಲವ ಸಮಾಜದ ಸ್ವಾಮೀಜಿಗಳು ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಬೇಕಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.


ಬಂಟ್ವಾಳಬಿಲ್ಲವ ಕಣ್ಮಣಿಗಳ ಅಭಿನಂದನಾ ಸಮಿತಿ, ತಾಲೂಕಿನ ಬಿಲ್ಲವ ಸಂಘಟನೆಗಳು, ಯುವವಾಹಿನಿ ಬಂಟ್ವಾಳ ಮತ್ತು ಮಾಣಿ ಘಟಕಗಳ ಸಹಭಾಗಿತ್ವದಲ್ಲಿ ರವಿವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆದ “ನಮ ಬಿರುವೆರ್ ಐಕ್ಯತಾ ಸಮಾವೇಶ” ದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯದ ದೈವಸ್ಥಾನ, ದೇವಸ್ಥಾನಗಳಿಗೆ ಅಭಿವೃದ್ಧಿಗಾಗಿ ಮುಜುರಾಯಿ ಇಲಾಖೆಯಯಿಂದ ೫೫ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಸಣ್ಣ ಸಣ್ಣ ದೈವಸ್ಥಾನ, ದೇವಸ್ಥಾನಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಡಲಾಗುವುದು ಎಂದ ಅವರು, ಧ್ವನಿ ಇಲ್ಲದ ಸಮಾಜದ ಧ್ವನಿಯಾಗುವ ಮೂಲಕ ನಮ್ಮನ್ನು ಈ ಮಟ್ಟಕ್ಕೇರಿಸಿರುವುದು ಬ್ರಹ್ಮಶ್ರೀ ನಾರಾಯಣ ಗುರು ಅವರ ಸಂದೇಶ. ನಾರಾಯಣ ಗುರು ಅಧ್ಯಯನ ಪೀಠಕ್ಕೆ ಪ್ರತೀ ವರ್ಷ ಸರಕಾರದ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಶ್ರೀ ರಾಮಕ್ಷೇತ್ರ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಿ ಶುಭಹಾರೈಸಿದರು.
ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಮತ್ತು ಕುಕ್ಕಾಜೆ ಆಂಜನೇಯ ಕ್ಷೇತ್ರದ ಶ್ರೀಕೃಷ್ಣ ಗುರೂಜಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಗೌರವಾಧ್ಯಕ್ಷ ಜಯ ಸಿ.ಸುವರ್ಣ ಅವರಿಗೆ ಗೌರವಾ ಭಿನಂದನೆ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಅವರನ್ನು ಅಭಿನಂದಿಸಲಾಯಿತು.
ಕಾಣಿಯೂರು ಕ್ಷೇತ್ರದ ಮಹಾಬಲ ಸ್ವಾಮೀಜಿ, ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಧರ್ಮದರ್ಶಿ ಕೃಷ್ಣ ಗುರೂಜಿ ಆಶೀರ್ವಚನ ನೀಡಿದರು.
ಬಂಟ್ವಾಳ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಲಬುರ್ಗಿ ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಬೃಹತ್ ಮತ್ತು ಂದ್ಯಮ ಕೈಗಾರಿಕೆ ಇಲಾಖೆಯ ಸಚಿವರ ಆಪ್ತ ಸಹಾಯಕ ಜಗನ್ನಾಥ ಬಂಗೇರ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಜಯಂತ ನಡುಬೈಲು, ಶ್ರೀನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಮಹಿಳಾ ಸಮಿತಿ ರಾಜ್ಯಾಧ್ಯಕ್ಷೆ ಗೀತಾಂಜಲಿ ಸುವರ್ಣ, ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಬಿ. ಇಂದಿರೇಶ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ರಮೇಶ್ ಮುಜಲ ಚಿತ್ರ ನಟಿ ಚಿರಶ್ರೀ ಅಂಚನ್, ತಾಲೂಕಿನ ವಿವಿಧ ಬಿಲ್ಲವ ಸಂಘಟನೆಗಳ ಅಧ್ಯಕ್ಷರು ಉಪಸ್ಥಿತರಿದ್ದರು. ಸಮಿತಿಯ ಗೌರವಾಧ್ಯಕ್ಷರಾದ ರುಕ್ಮಯ ಪೂಜಾರಿ, ಸಂಜೀವ ಪೂಜಾರಿ, ಮಾಯಿಲಪ್ಪ ಸಾಲ್ಯಾನ್ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಅಧ್ಯಕ್ಷ ಯಶವಂತ ದೇರಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯ್ಲ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಗೋಪಾಲ ಅಂಚನ್ ವಿವಿಧ ಬೇಡಿಕೆಗಳ ಮನವಿಯನ್ನು ವಾಚಿಸಿದರು. ದಿನೇಶ್ ಸುವರ್ಣ , ಮಹೇಶ್ ಕರ್ಕೆರಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here