ಮಂಗಳೂರು : ಮಂಗಳೂರಿನ ಡಿಸಿ ಕಚೇರಿಯ ಮುಂದೆ ನಡೆಯುತ್ತಿದ್ದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿದ ಪ್ರತಿಭಟನೆ ವ್ಯಾಪಕ ಸ್ವರೂಪವನ್ನು ಪಡೆದುಕೊಂಡಿತು. ಪೊಲೀಸರ ಲಾಠಿ ಚಾರ್ಜ್ ನಿಂದಾಗಿ ಚುದುರಿದ ಪ್ರತಿಭಟನಾಕಾರರು ಅಂಗಡಿ ಮುಂಗಟ್ಟುಗಳಲ್ಲಿ ಹಡಗಿ ಕುಳಿತು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದಾರೆ. ಹೀಗಾಗಿ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.
ನಗರದಲ್ಲಿ ಪ್ರತಿಭಟನೆಯ ಸ್ವರೂಪ ವ್ಯಾಪಕತೆಯನ್ನು ಪಡೆದುಕೊಂಡಿದ್ದು, ಎಲ್ಲೆಲ್ಲೂ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಪ್ರತಿಭಟನಾಕರಾರನ್ನು ಚದುರಿಸುವ ಸಲುವಾಗಿ ಗಾಳಿಯಲ್ಲಿ ಗುಂಡುಹಾರಿಸಿದ್ದಾರೆ. ಈ ಮೂಲಕ ಬಿಗುವಿನಿಂದ ಕೂಡಿರುವ ಪರಿಸ್ಥಿತಿಯನ್ನು ಹತೋಟಿಗೆ ತರುವಂತ ಕೆಲಸವನ್ನು ಮಾಡುತ್ತಿದ್ದಾರೆ.