Friday, April 5, 2024

ಮಾಣಿಲ ಕುಕ್ಕಾಜೆ: ಅಭಿನಂದನಾ ಸಭೆ

ವಿಟ್ಲ: ಮಾಣಿಲ ಗ್ರಾಮದ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2021ನೇ ವರ್ಷದಲ್ಲಿ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಅದರ ಪೂರ್ವಭಾವಿ ಸಿದ್ಧತೆಗಳು ನಡೆಯುತ್ತಿದ್ದು, ಇತ್ತೀಚೆಗೆ ಶ್ರೀ ಕ್ಷೇತ್ರದಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆದಿತ್ತು. ಇದರ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿ ಅವರ ನೇತೃತ್ವದಲ್ಲಿ ಅಭಿನಂದನಾ ಸಭೆ ನಡೆಯಿತು.
ಪಾದಯಾತ್ರೆಗೆ ಸಹಕರಿಸಿದ ಭಕ್ತರಿಗೆ ಅಭಿನಂದನಾ ಪತ್ರ ನೀಡಲಾಯಿತು. ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರದಲ್ಲಿ ಮುಂದಿನ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಚರ್ಚೆ ನಡೆಯಿತು. ಪ್ರತಿಯೊಬ್ಬರೂ ಈ ಮಹಾಕಾರ್ಯದ ಯಶಸ್ವಿಗೆ ಕೈಜೋಡಿಸಬೇಕೆಂದು ತಿಳಿಸಿದರು.
ಸಮಾರಂಭದಲ್ಲಿ ಮಾಣಿಲ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜೇಶ್ ಬಾಳೆಕಲ್ಲು, ಸದಸ್ಯ ಶ್ರೀಧರ ಬಾಳೆಕಲ್ಲು ಪಿಡಬ್ಲ್ಯೂಡಿ ಗುತ್ತಿಗೆದಾರ ಉದಯಕುಮಾರ್ ನಗ್ರಿ ಕಾಂಜಿಲ, ಒಡಿಯೂರುಶ್ರೀ ಗ್ರಾಮ ವಿಕಸ ಯೋಜನೆಯ ಮಾಣಿಲ ಗ್ರಾಮ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿ ಬಿರ್ಕಾಪು, ಮಾಣಿಲ ವಿಷ್ಣುಮೂರ್ತಿ ಗೆಳೆಯರ ಬಳಗದ ಅಧ್ಯಕ್ಷ ಅವಿನಾಶ್, ಕುಕ್ಕಾಕೆ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ರವಿ ಕುಟ್ಯಮಡ್ಕ, ಮಂಜುನಾಥ ಶೆಟ್ಟಿ, ಮಾಣಿಲ ಕೆಎಫ್‌ಸಿ ಅಧ್ಯಕ್ಷ ಶ್ರೀಧರ ಪಿ.ಕೆ, ಕುಕ್ಕಾಜೆ ಕ್ಷೇತ್ರ ಮಹಿಳಾ ಸೇವಾ ಸಮಿತಿ ಕಾರ್ಯದರ್ಶಿ ಗೀತಾ ಪಲಿಯೂರು, ಕುಕ್ಕಾಜೆ ಕಾಳಿಕಾ ಕಲಾ ಸಂಘದ ಅಧ್ಯಕ್ಷ ಸಂಜೀವ ಪಳನೀರು ಇನ್ನಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪಿಡಬ್ಲ್ಯೂಡಿ ಗುತ್ತಿಗೆದಾರ ಉದಯಕುಮಾರ್ ನಗ್ರಿ ಕಾಂಜಿಲ ಅವರು ಆಂಜನೇಯ ಮತ್ತು ಗಣಪತಿ ದೇವರ ನೂತನ ಗುಡಿ ನಿರ್ಮಿಸಿ ಕೊಡುವ ಬಗ್ಗೆ ವಾಗ್ದಾನ ನೀಡಿದರು. ಹರೀಶ್ ಕೊಕ್ಕಾಡ ಸ್ವಾಗತಿಸಿದರು. ರವಿ ಎಂ.ಎಸ್ ವಂದಿಸಿದರು. ಗಿರೀಶ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು.

More from the blog

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ವಿಟ್ಲ : ಮಹಿಳೆ ಆತ್ಮಹತ್ಯೆ

ವಿಟ್ಲ: ವಿಟ್ಲಪಡ್ನೂರು ಗ್ರಾಮದ ಕುಂಟುಕುಡೇಲು ಕಾಪಿಕಾಡು ನಿವಾಸಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿ.ರಾಮಣ್ಣ ನಾಯ್ಕ ಅವರ ಪತ್ನಿ ಸುಶೀಲಾ ಅವರು ಮನೆ ಸಮೀಪದ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.