Sunday, April 14, 2024

ಪದ್ಯಾಣ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ: ಡಿ. 15 ರಂದು ಪ್ರದಾನ

ವಿಟ್ಲ: ತೆಂಕುತಿಟ್ಟು ಯಕ್ಷಗಾನದ ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಈ ಸಾಲಿನ ’ಪದ್ಯಾಣ ಪ್ರಶಸ್ತಿ’ ಘೋಷಣೆಯಾಗಿದೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ದಶಂಬರ ೧೫ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ, ಕಲಾಪೋಷಕ ಡಾ.ಟಿ.ಶ್ಯಾಮ ಭಟ್ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಬಂಟ್ವಾಳ ತಾಲೂಕಿನ ಮಿತ್ತನಡ್ಕ ಸನಿಹದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಂಪನ್ನವಾಗಲಿದೆ. ಯಕ್ಷಗಾನ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಯಕ್ಷಗಾನ ಅರ್ಥದಾರಿ ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ ಅಭಿನಂದನಾ ಭಾಷಣ ಮಾಡಲಿದ್ದಾರೆ. ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಸೇರಾಜೆ ಶುಭಾಶಂಸನೆ ಮಾಡಲಿದ್ದಾರೆ. ಈ ಪ್ರಶಸ್ತಿಯನ್ನು ’ಪದ್ಯಾಣ ಪ್ರಶಸ್ತಿ ಸಮಿತಿ’ಯು ಆಯೋಜಿಸಿದೆ.
ಈ ಸಂದರ್ಭದಲ್ಲಿ ’ಶ್ರೀ ಹನುಮಗಿರಿ ಮೇಳ’ದವರಿಂದ ’ಸತ್ಯಾಂತರಂಗ’ ಪ್ರಸಂಗಗಳ ಬಯಲಾಟ ಜರುಗಲಿದೆ.

More from the blog

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...