Saturday, April 6, 2024

ಮಾಂಬಾಡಿ ಮನೆತನದಲ್ಲಿ ಯಕ್ಷಗಾನದ ಶೈಕ್ಷಣಿಕ ಶಿಸ್ತಿನ ಬದ್ಧತೆಯಿದೆ: ಪದ್ಯಾಣ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರೊ.ಎಂ.ಎಲ್.ಸಾಮಗ

ಕಲಾ ಬದುಕಿನ ಒಂದು ಕಾಲಘಟ್ಟದ ಬಳಿಕ ಪ್ರಾಪ್ತವಾಗುವ ಪ್ರಶಸ್ತಿಗಳು, ಸಂಮಾನಗಳು, ಗೌರವಗಳು ಕಲಾವಿದನಿಗೆ ಸಂತೃಪ್ತ ಭಾವ ತರಲು ಸಹಕಾರಿ. ತನ್ನ ನಡುವೆ ಇರುವ ಸಾಧಕ ಕಲಾವಿದರನ್ನು ಹುಡುಕಿ ಗೌರವಿಸುವುದು ಕೂಡಾ ಸುಸಂಸ್ಕೃತ ಸಮಾಜದ ಜವಾಬ್ದಾರಿಯಾಗಿರುತ್ತದೆ. ಅದು ಕಲೆಗೆ ನೀಡುವ ಗೌರವ ಕೂಡಾ ಹೌದು. ಎಂದು ಕರ್ನಾಟಕ ಬಯಲಾಟ ಅಕಾಡೆಮಿಯ ಮಾಜಿ ಅಧ್ಯಕ್ಷ, ವಿಶ್ರಾಂತ ಪ್ರಾಚಾರ್ಯ ಪ್ರೊ.ಎಂ.ಎಲ್.ಸಾಮಗ ಹೇಳಿದರು.
ಅವರು ಬಂಟ್ವಾಳ ತಾಲೂಕಿನ ಮಿತ್ತನಡ್ಕ ಸನಿಹದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಳದ ಸಭಾಭವನದಲ್ಲಿ ಜರುಗಿದ ’ಪದ್ಯಾಣ ಪ್ರಶಸ್ತಿ ಪ್ರದಾನ’ ಸಮಾರಂಭದಲ್ಲಿ ಮಾತನಾಡುತ್ತಾ, ಯಕ್ಷಗಾನಕ್ಕೆ ಪಠ್ಯವು ಸಿದ್ಧವಾಗಿದ್ದು ಅದಕ್ಕೊಂದು ಶೈಕ್ಷಣಿಕ ಆವರಣ, ಶಿಸ್ತಿನ ಪ್ರಮಾಣೀಕರಣವಾಗುತ್ತಿರುವುದು ಸಂತೋಷದ ವಿಚಾರ. ಇಂತಹ ಯಕ್ಷಗಾನದ ಶೈಕ್ಷಣಿಕ ಶಿಸ್ತನ್ನು ಹಾಗೂ ಬದ್ಧತೆಯನ್ನು ಮಾಂಬಾಡಿ ಮನೆತನದಲ್ಲಿ ಕಾಣಬಹುದು ಎಂದರು.
ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಸಭಾಧ್ಯಕತೆಯನ್ನು ವಹಿಸಿದ್ದರು. ಯಕ್ಷಶಿಕ್ಷಣ ಗುರು ಶ್ರೀ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಹಾರ, ಶಾಲು, ಹಣ್ಣುಹಂಪಲು, ಸಂಮಾನ ಪತ್ರ, ಸ್ಮರಣಿಕೆ ಮತ್ತು ನಿಧಿಯೊಂದಿಗೆ ’ಪದ್ಯಾಣ ಪ್ರಶಸ್ತಿ’ಯನ್ನು ಪ್ರದಾನಿಸಲಾಯಿತು. ವೇದಿಕೆಯಲ್ಲಿ ಮಾಂಬಾಡಿಯರ ಧರ್ಮಪತ್ನಿ ಲಕ್ಷ್ಮೀ ಅಮ್ಮ ಉಪಸ್ಥಿತರಿದ್ದರು. ಸಂಮಾನಿತರನ್ನು ಅರ್ಥದಾರಿ ವಿದ್ವಾನ್ ಹಿರಣ್ಯ ವೆಂಕಟೇಶ್ವರ ಭಟ್ಟರು ನುಡಿಹಾರಗಳೊಂದಿಗೆ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಪ್ರಶಸ್ತಿ ಪುರಸ್ಕೃತ ಮಾಂಬಾಡಿಯವರ ಕುರಿತು ಪತ್ರಕರ್ತ, ಅಂಕಣಗಾರ ನಾ. ಕಾರಂತ ಪೆರಾಜೆ ಸಂಪಾದಕತ್ವದ ಕಿರು ಪುಸ್ತಿಕೆಯನ್ನು ಟಿ.ಶ್ಯಾಮ ಭಟ್ಟರು ಬಿಡುಗಡೆಗೊಳಿಸಿದರು. ಪದ್ಯಾಣ ಶ್ರೀಕ್ಷೇತ್ರದ ಆಡಳಿತ ಮೊಕ್ತೇಸರ ಶ್ರೀ ಸೇರಾಜೆ ಸತ್ಯನಾರಾಯಣ ಭಟ್ಟರು ಶುಭಾಶಂಸನೆ ಮಾಡಿದರು. ಪದ್ಯಾಣ ಪ್ರಶಸ್ತಿ ಸಮಿತಿಯ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ಸ್ವಾಗತಿಸಿದರು. ಡಾ.ಸುಬ್ರಹ್ಮಣ್ಯ ಭಟ್ ಪದ್ಯಾಣ ವಂದಿಸಿದರು. ನಾ. ಕಾರಂತ ಪೆರಾಜೆ ನಿರ್ವಹಿಸಿದರು.
ಸಮಿತಿಯ ಅಧ್ಯಕ್ಷರಾದ ಪದ್ಯಾಣ ಗೋಪಾಲಕೃಷ್ಣ ಭಟ್ಟರು ಅತಿಥಿಗಳಿಗೆ ಸ್ಮರಣಿಕೆ ನೀಡಿದರು. ಪದ್ಯಾಣ ಗಣಪತಿ ಭಟ್, ಪದ್ಯಾಣ ಶಂಕರನಾರಾಯಣ ಭಟ್, ಪದ್ಯಾಣ ಶಿವರಾಮ ಭಟ್.. ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಹನುಮಗಿರಿ ಮೇಳದವರಿಂದ ’ಸತ್ಯಾಂತರಂಗ’ ಪ್ರದರ್ಶನ ಜರುಗಿತು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...