Sunday, April 7, 2024

ನಿವೃತ್ತ ಮುಖ್ಯಶಿಕ್ಷಕ ಫಕ್ರುದ್ದೀನ್‌ ಗೆ ನಾಗರಿಕರ ಸನ್ಮಾನ: ಗುರಿ ತೋರಿದ ಗುರುವಿಗೆ ಕಾರು ಉಡುಗೊರೆ

ಬಂಟ್ವಾಳ : ಪಾಣೆಮಂಗಳೂರು ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು ತಮಗೆ ಅಕ್ಷರಭ್ಯಾಸ ಮಾಡಿದ ಶಿಕ್ಷಕ ನಿವೃತ್ತಗೊಂಡ ಸಂದರ್ಭ ಕಾರೊಂದನ್ನು ಉಡುಗೊರೆಯಾಗಿ ನೀಡಿ ಬೀಳ್ಕೊಡುವ ಮೂಲಕ ಮಾದರಿಯಾಗಿದ್ದಾರೆ. ಪಾಣೆಮಂಗಳೂರು ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಹಾಜಿ ಫಕ್ರುದ್ದೀನ್ ಬಿ.ಕೆ. ಸೇವೆಯಿಂದ ನಿವೃತ್ತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರಿಗೆ ಪಾಣೆಮಂಗಳೂರು ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘ ಮತ್ತು ಊರ ನಾಗರಿಕರ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಜಿ ಪಕ್ರುದ್ದೀನ್‌ರನ್ನು ಸನ್ಮಾನಿಸಿ ಕಾರೊಂದನ್ನು ಉಡುಗೊರೆಯಾಗಿ ನೀಡಲಾಯಿತು. ಅಕ್ಕರಂಗಡಿ ಜುಮಾ ಮಸೀದಿಯ ಖತೀಬ್ ಆರಿಫ್ ಬಾಖವಿ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯ ಸಂಚಾಲಕ ಹಾಜಿ ಸೈಫುದ್ದೀನ್ ಮುಹಮ್ಮದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ. ಜ್ಞಾನೇಶ್, ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಮುಖ್ಯ ಅತಿಥಿಗಳಾಗಿದ್ದರು.

ಪುರಸಭಾ ಸದಸ್ಯ ಇದ್ರೀಸ್ ಪಿ.ಜೆ., ಮೆಲ್ಕಾರ್ ವುಮೆನ್ಸ್ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ಲತೀಫ್, ವಗ್ಗ ಕಾಲೇಜಿನ ಮುಖ್ಯಶಿಕ್ಷಕ ಶೇಖ್ ಆದಂ ಸಾಹೇಬ್, ಉಪನ್ಯಾಸಕ ಅಬ್ದುರ್ರಝಾಕ್ ಅನಂತಾಡಿ, ನಿವೃತ್ತ ಶಿಕ್ಷಕರಾದ ಅಮಾನುಲ್ಲಾ ಖಾನ್, ರಾಮಚಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು. ನಿವೃತ್ತ ಶಿಕ್ಷಕ ಬಿ.ಎಂ.ತುಂಬೆ ಅಭಿನಂದನಾ ಭಾಷಣ ಮಾಡಿದರು.

ಇದೇ ಸಂದರ್ಭದಲ್ಲಿ ನೆನಪಿನಂಗಳದ 40 ವರ್ಷ ಪುಸ್ತಕ ಬಿಡುಗಡೆ ಹಾಗೂ ನಮ್ಮ ಮಾಣಿಕ್ಯ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ವಿವಿಧ ಸಂಘಟನೆಗಳ ವತಿಯಿಂದ ಫಕ್ರುದ್ದೀನ್‌ರಿಗೆ ಸನ್ಮಾನ, ಗೌರವ ವಂದನೆ ಕಾರ್ಯಕ್ರಮ ನಡೆಯಿತು.

ನಿವೃತ್ತ ಮುಖ್ಯಶಿಕ್ಷಕ ಹಾಜಿ ಫಕ್ರುದ್ದೀನ್ ಬಿ.ಕೆ. ಮಾತನಾಡಿ, ನನ್ನ ನಿವೃತ್ತಿಗೆ ಮೊದಲು ಶಾಲೆಯನ್ನು ಒಂದು ಉತ್ತಮ ಸಂಸ್ಥೆಯಾಗಿ ಪರಿವರ್ತಿಸಲು ಕಾರಣಕರ್ತರಾದ ಹಿರಿಯ ವಿದ್ಯಾರ್ಥಿಗಳು, ಸಂಚಾಲಕರಿಗೂ, ಗುರುವೃಂದಕ್ಕೂ ಧನ್ಯವಾದ. ಮುಂದೆಯೂ ಈ ಶಾಲೆಯನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು.

ದಾರುಲ್ ಇಸ್ಲಾಂ ಅನುದಾನಿತ ಶಾಲೆಯ ಮುಖ್ಯೋಪಾಧ್ಯಾಯ ಹಮೀದ್ ಕೆ. ಮಾಣಿ ಸ್ವಾಗತಿಸಿ, ಪ್ರಸ್ತಾವಿಸಿದರು. ಶಿಕ್ಷಕ ನೂರುದ್ದೀನ್ ವಂದಿಸಿದರು. ಉಳಿಬೈಲು ಪ್ರಾಥಮಿಕ ಶಾಲೆಯ ಶಿಕ್ಷಕ ಅಕ್ಬರ್ ಅಲಿ ಕಾರ್ಯಕ್ರಮ ನಿರೂಪಿಸಿದರು.

 

More from the blog

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...

ಮಿತಿ ಮೀರಿದ ತಾಪಮಾನ : ಖಡಕ್​ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿರು ಬಿಸಿಲು ಹೆಚ್ಚಳವಾಗುತ್ತಿದ್ದು ಮುಂದಿನ 14 ದಿನಗಳ ಕಾಲ ಬಿಸಿಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​...

ಮನೆಯ ಮಹಡಿಯಿಂದ ಬಿದ್ದು ಬಾಲಕ ಸಾವು

ಬಂಟ್ವಾಳ: ಮನೆಯ ಮಹಡಿಯ ಮೇಲಿಂದ ಕೆಳಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಎ.‌ ೧ರ ಮುಂಜಾನೆ ನಡೆದಿದೆ. ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್(೧೫) ಮೃತಪಟ್ಟ ಬಾಲಕ. ಆತ ಮನೆಯಲ್ಲಿ ದೊಡ್ಡಮ್ಮನ...

ಮಾಂಸ ಪ್ರಿಯರಿಗೆ ಬೆಲೆ ಏರಿಕೆ ಶಾಕ್.. ಕೋಳಿ ಮಾಂಸದ ದರ ಏರಿಕೆ

ಮಂಗಳೂರು: ಕೋಳಿಮಾಂಸ, ಮೀನಿನ ದರ ಏರುಗತಿ ಯಲ್ಲಿ ಸಾಗುತ್ತಿದ್ದು ಮಾಂಸಾಹಾರ ಪ್ರಿಯರ ಜೇಬಿಗೂ ಕತ್ತರಿ ಬೀಳುವಂತಾಗಿದೆ. ಪ್ರಸ್ತುತ ಕೋಳಿಮಾಂಸಕ್ಕೆ (ವಿದ್‌ ಸ್ಕಿನ್‌) ಕೆ.ಜಿ.ಗೆ ಬ್ರಾಯ್ಲರ್‌ ಕೆಲವು ಕಡೆ 235-240 ರೂ., ಟೈಸನ್‌ 270 ರೂ....