ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕ್ಕೆ ಒಳಪಟ್ಟ ಬಂಟ್ವಾಳ ಪುರಸಭೆಯ ಬಿ.ಕಸಬಾ ವಲಯದಲ್ಲಿ ಬೂತ್ ಮಟ್ಟದ ಪಕ್ಷದ ಬಲವರ್ಧನೆ ಹಾಗೂ ಸಂಘಟನೆಗಾಗಿ “ಪುರಸಭಾ ಮಿಲನ” ಕಾರ್ಯಕ್ರಮ ಬಂಟ್ವಾಳ ಬೈಪಾಸ್ ನ ಹೋಟೇಲ್ ಪ್ರೀತೇಶ್ ಸಭಾಂಗಣದಲ್ಲಿ ಡಿ.15 ರಂದು ಸಂಜೆ ೪ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಂಟ್ವಾಳ ಕಸಬಾಕ್ಕೆ ಒಳಪಟ್ಟ ಚುನಾಯಿತ ಜನಪ್ರತಿನಿಧಿಗಳು, ಮಂಚೂಣಿ ಘಟಕದ ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರು, ಸರ್ವಸದಸ್ಯರು ಹಾಗೂ ಹಿರಿಯ ಕಿರಿಯ ಗೌರವಾನ್ವಿತ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ “ಪುರಸಭಾ ಮಿಲನ” ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಲಯ ಕಾಂಗ್ರೇಸ್ ಬಂಟ್ವಾಳ ಕಸಬಾ ದ ಅಧ್ಯಕ ವಾಸು ಪೂಜಾರಿ ಲೊರೆಟ್ಟೊ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಬೇಬಿ ಕುಂದರ್ ತಿಳಿಸಿದರು.
ಈ ಸಂದರ್ಭದಲ್ಲಿ ಕಳೆದ ವಿಧಾನಸಭೆ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ, ಪಕ್ಷದ ಸಂಘಟನೆ ಹಾಗೂ ಬಲವರ್ಧನೆಯ ಬಗ್ಗೆ ಸಲಹೆ ಸೂಚನೆ ಪಡೆದು ಕಾರ್ಯಕ್ರಮ ರೂಪಿಸುವುದು ಹಾಗೂ ವಲಯ ಕಾಂಗ್ರೇಸ್ ಹಾಗೂ ಬೂತ್ ಸಮಿತಿ ಪುನರಚನೆಯಾಗಲಿದೆ ಎಂದು ತಿಳಿಸಿದರು.