Saturday, April 6, 2024

ಮಂಗಳೂರು ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ, ಸತ್ಯಾಸತ್ಯತೆ ಬಹಿರಂಗಪಡಿಸಿ: ರಮಾನಾಥ ರೈ ಒತ್ತಾಯ

ಮಂಗಳೂರು: ಗುರುವಾರ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಬಳಿಕ ನಡೆದ ಹಿಂಸಾಚಾರಕ್ಕೆ ಕಾಂಗ್ರೆಸ್ ಕುಮ್ಮಕ್ಕು‌ ನೀಡಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾದ ಸಂಗತಿಯಾಗಿದ್ದು, ಈ ಘಟನಯೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಒತ್ತಾಯಿಸಿದ್ದಾರೆ.



ಅವರು ಅದಿತ್ಯವಾರ (ಇಂದು) ಬೆಳಿಗ್ಗೆ ಮಂಗಳೂರಿನ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ , ಈ ಗಲಭೆಗೆ ಮುಖ್ಯ ಕಾರಣ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಎಂದು ಒತ್ತಿ ಹೇಳಿದರು.
ಶಾಂತಿಯಾಗಿದ್ದ ಮಂಗಳೂರಿನಲ್ಲಿ ಉದ್ದೇಶ ಪೂರ್ವಕವಾಗಿ ಗಲಭೆ ಮಾಡುವ ದೃಷ್ಠಿಯಿಂದ ಐಪಿಸಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಹಾಕಿದ್ದರು. ಘಟನೆಯ ಬಗ್ಗೆ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು. ಆಗ ತಪ್ಪಿತಸ್ಥರು ಯಾರು? ಎಂಬುದು ತಿಳಿಯುತ್ತದೆ ಎಂದು ಅವರು ಹೇಳಿದರು.
ಪ್ರತಿಭಟನೆ ಅಥವಾ ಘಟನೆಯಲ್ಲಿ ಇಲ್ಲದ ಕಾಂಗ್ರೆಸ್ ಮೇಲೆ ಸುಮ್ಮನೆ ವೃಥಾ ಆರೋಪ ಹೊರಿಸಿ ಗೂಬೆ ಕೂರಿಸುವ ಕೆಲವಾಗುತ್ತಿದೆ, ಪಕ್ಷದ ವಿರುದ್ಧ ಅಪಪ್ರಚಾರ ಮಾಡುವ ಕೆಲಸವಾಗುತ್ತಿದೆ ಎಂದರು.
ಕಾಂಗ್ರೇಸ್ ಮೇಲೆ ಸುಮ್ಮನೆ ಆರೋಪ ಮಾಡುವ ಬಿಜೆಪಿಯಿಂದಲೇ ಈ ಗಲಾಟೆ ನಡೆದಿದ್ದು , ಪ್ರಕರಣವನ್ನು ತಿರುಚಲು ಕಾಂಗ್ರೇಸ್ ಮೇಲೆ ಆರೋಪ ಮಾಡುತ್ತಿದೆ ಎಂದು ಅವರು ಹೇಳಿದರು.

ಗೋಲಿಬಾರ್​ನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಇದು ಸರ್ಕಾರದ ಕೃಪೆಯಿಂದ ನಡೆದ ಹತ್ಯೆ. ಸಂತ್ರಸ್ತ ಕುಟುಂಬವನ್ನು ಸಂತೈಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಂಗಳೂರಿಗೆ ಬರಲು ತಡೆಗಟ್ಟಿದ್ದಾರೆ. ಇದು ಪ್ರಜಾಪ್ರಭುತ್ವದ ಸರಿಯಾದ ಕ್ರಮವಲ್ಲ. ವಿಪಕ್ಷ ನಾಯಕರು ಬರುವುದು ಜನರಿಗೆ ಸಾಂತ್ವನ ಹೇಳಲು ಅವರಿಗೂ ಜವಾಬ್ದಾರಿ ಇದೆ ಎಂದರು.ಕಾಂಗ್ರೆಸ್ ಎಲ್ಲಿಯೂ ಪ್ರಚೋದನಕಾರಿ ಭಾಷಣ ಮಾಡಿಲ್ಲ. ತಮ್ಮ ಸರ್ಕಾರದ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ. ಈ ಹಿಂದಿನ ಘಟನಾವಳಿಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದು ಯಾರು ಎಂಬುದು ಜನರಿಗೆ ಗೊತ್ತಿದೆ. ಕಾಂಗ್ರೆಸ್ ಗಲಭೆ ಸೃಷ್ಟಿಸಿದೆ ಎನ್ನುವಂತಹದ್ದು ಅವರ ತಪ್ಪನ್ನು ಮುಚ್ಚಿ ಹಾಕುವ ಪ್ರಯತ್ನ ಎಂದು ಹೇಳಿದರು.ಮುಖ್ಯಮಂತ್ರಿಗಳ ಮಂಗಳೂರು ಭೇಟಿಯ ವೇಳೆ ಪ್ರಚೋದನಕಾರಿ ಭಾಷಣ ಮಾಡುವ ನಳಿನ್ ಕುಮಾರ್ ಕಟೀಲ್ ಅವರು ಬಂದಿದ್ದು, ಅವರು ಬೇರೆಯವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಬಂದೂಕುಗಳು ಇರುವುದು ಪೂಜೆ ಮಾಡಲು ಅಲ್ಲ ಎಂದು ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಹೇಳಿದಂತೆ ಹಿಂದೆ ಯಾವತ್ತೂ ಈ ರೀತಿ ಕಾಂಗ್ರೆಸ್ ಮಂತ್ರಿಗಳು ಮಾತನಾಡಿಲ್ಲ. ಕೇಂದ್ರ ಸಚಿವರು ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದ್ದಾರೆ ಎಂದರು.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...