ಬಂಟ್ವಾಳ: ಮಂಗಳೂರು ನಗರದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ವಿರುದ್ದ ನಿಷೇಧಾಜ್ಞೆ ಜಾರಿ ಯನ್ನು ಉಲ್ಲಂಘಿಸಿದ ಗುಂಪು ಪೊಲೀಸರ ಮೇಲೆ, ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು ,
ಘೋಷಣೆ ಪ್ರತಿಭಟನೆ ಹಿಂಸಾಚಾರ ರೂಪ ಪಡೆದ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ನಗರ ವ್ಯಾಪ್ತಿಯ ಅಂಗನವಾಡಿ ಕೇಂದ್ರ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ, ಐಟಿಐ, ಡಿಪ್ಲೊಮಾ, ವೃತ್ತಿಪರ ಕೋರ್ಸ್ ಹಾಗೂ ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು ನಗರದಲ್ಲಿ ಕರ್ಫೂ ವಿಧಿಸಲಾಗಿದ್ದು, ನಾಳೆಯೂ ಹಿಂಸಾಚಾರ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದ. ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರಜೆ ಘೋಷಿಸಿ ಆದೇಶಿಸಿದ್ದಾರೆ.