ಬಂಟ್ವಾಳ: ರಾಜ್ಯದ 15 ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಜಯ ಗಳಿಸಿದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಸಂಗಬೆಟ್ಟು ಬಿಜೆಪಿ ವಲಯ ಅಧ್ಯಕ್ಷ ರತ್ನ ಕುಮಾರ ಚೌಟ, ತಾ.ಪಂ.ಸದಸ್ಯ ಪ್ರಭಾಕರ ಪ್ರಭು ಅವರ ನೇತೃತ್ವದಲ್ಲಿ ಕಾರ್ಯಕರ್ತರು ಬಿಜೆಪಿ ಧ್ವಜ ಹಾರಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಸಂಗಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಗುಲಾಬಿ ಶೆಟ್ಟಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ಪಂಚಾಯತ್ ಸದಸ್ಯ ರಾದ ಮಾಧವ ಶೆಟ್ಟಿಗಾರ್, ಎಸ್.ಪಿ.ಶ್ರೀಧರ್, ಸುರೇಶ್ ಕುಲಾಲ್, ಪಕ್ಷದ ಪ್ರಮುಖರಾದ ಉಮೇಶ್ ಗೌಡ ಮಂಚಕಲ್ಲು,ಮಹೇಶ್ ಗೌಡ,ಸಂದೇಶ್ ಹೊಕ್ಕಾಡಿಗೋಳಿ, ಅಜಯ್ ಹಲಾಯಿ ಕುಕ್ಕಿಪಾಡಿ, ಬೂಬ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು