Saturday, April 13, 2024

ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜು: ಎನ್‌.ಎಸ್‌.ಎಸ್ ವಿಶೇಷ ವಾರ್ಷಿಕ ಶಿಬಿರ 

ಬಂಟ್ವಾಳ: ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜ್ ನ 2019-20 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರ ಹೆಣ್ಣೂರುಪದವಿನ ದ.ಕ. ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಡಿ. 13ರಂದು ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾಯಕತ್ವ ಬೆಳೆಸುವಲ್ಲಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. ಎನ್‌.ಎಸ್‌.ಎಸ್ ಯುವ ಜನರಲ್ಲಿ ದೇಶಾಭಿಮಾನ ಬೆಳೆಸುವ, ರಾಷ್ಟ್ರೀಯತೆಯನ್ನು ಬಿಂಬಿಸುವ ಕಾರ್ಯ ನಿರ್ವಹಿಸುತ್ತದೆ. ವಿದ್ಯಾರ್ಥಿಗಳು ಎನ್‌.ಎಸ್‌.ಎಸ್ ಮೂಲಕ ಪ್ರಾಮಾಣಿಕ ವ್ಯಕ್ತಿಗಳಾಗಿ ದೇಶ ಸೇವೆ ಮಾಡಬೇಕು ಎಂದು ಹೇಳಿದರು.
ತಾ.ಪಂ. ಸದಸ್ಯ ಪ್ರಭಾಕರ ಪ್ರಭು ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಎನ್‌.ಎಸ್‌.ಎಸ್ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಸಮಾಜದಿಂದ ಗುರುತಿಸಲ್ಪಡುವ ಕೆಲಸಗಳನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದರು.
ಕುಕ್ಕಿಪಾಡಿ ಗ್ರಾ.ಪಂ. ಅಧ್ಯಕ್ಷ ದಿನೇಶ್ ಸುಂದರ ಶಾಂತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಭಟ್‌ ರವರು ಎನ್‌.ಎಸ್‌.ಎಸ್ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಸಂದೇಶ್ ಶೆಟ್ಟಿ, ಎಪಿಎಂಸಿ ಮಾಜಿ ಸದಸ್ಯ ರತ್ನ ಕುಮಾರ್ ಚೌಟ, ರೋಟರಿ ಕ್ಲಬ್ ಅಧ್ಯಕ್ಷ ಪದ್ಮರಾಜ್ ಬಳ್ಳಾಲ್, ದ.ಕ.ಜಿ.ಪ.ಹಿ.ಪ್ರಾ ಶಾಲೆ ಹೆಣ್ಣೂರುಪದವು ಇದರ ಮುಖ್ಯ ಶಿಕ್ಷಕಿ ವಿಜಯ ಭಂಡಾರಿ ಅವರು ವಿದ್ಯಾರ್ಥಿಗಳಿಗೆ ಮತ್ತು ಶಿಬಿರಕ್ಕೆ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ನಸೀಮಾ ಬೇಗಂ ಎಸ್. ಅವರು ವಿದ್ಯಾರ್ಥಿಗಳಿಗೆ ಎನ್‌ಎಸ್‌ಎಸ್‌ ನ ಮಹತ್ವ ವಿವರಿಸಿ, ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾ.ಪಂ. ಸದಸ್ಯರಾದ ಎಸ್.ಪಿ ಶ್ರೀಧರ್, ಎನ್‌ಎಸ್‌ಎಸ್ ಯೋಜನಾಧಿಕಾರಿ ದೇವಿಪ್ರಸಾದ್, ಸಹ ಶಿಬಿರಾಧಿಕಾರಿ ಡಾ. ಶ್ರೀನಿವಾಸ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪೂವಪ್ಪ, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸೇಸಪ್ಪ ಪೂಜಾರಿ, ಕುಕ್ಕಿಪಾಡಿ ಗ್ರಾ.ಪಂ. ಸದಸ್ಯ ಲಿಂಗಪ್ಪ, ಮಾಜಿ ಅಧ್ಯಕ್ಷೆ ರೇಖಾ, ರೋಟರಿ ಕ್ಲಬ್ ಸದಸ್ಯ ಸೀತಾರಾಮ ಶೆಟ್ಟಿ, ಎನ್‌ಎಸ್‌ಎಸ್ ಘಟಕದ ನಾಯಕ ದಿನೇಶ್ ಕೆ. ಉಪಸ್ಥಿತರಿದ್ದರು.
ಶಿಬಿರಾರ್ಥಿ ಮನೀಶ್ ಪ್ರಾರ್ಥಿಸಿ, ಶಿಬಿರದ ನಾಯಕ ಗುರುಪ್ರಸಾದ್ ಸ್ವಾಗತಿಸಿ, ಶಿಬಿರಾರ್ಥಿ ಪ್ರಜ್ವಲ್ ವಂದಿಸಿದರು. ಎನ್‌ಎಸ್‌ಎಸ್ ಘಟಕದ ನಾಯಕಿ ನೀಮಾ ಕಾರ್ಯಕ್ರಮ ನಿರೂಪಿಸಿದರು. ಶಿಬಿರಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಗೀತೆಯನ್ನು ಹಾಡಿದರು.

More from the blog

ಯುವಮೋರ್ಚಾ ಬಂಟ್ವಾಳ ವತಿಯಿಂದ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬಿ. ಸಿ ರೋಡಿನ ರಕ್ತೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ

ಯುವಮೋರ್ಚಾ ಬಂಟ್ವಾಳ ವತಿಯಿಂದ ನರೇಂದ್ರ ಮೋದಿ ಮತೊಮ್ಮೆ ಪ್ರಧಾನಿಯಾಗಲೆಂದು ರಕ್ತೇಶ್ವರಿ ದೇವಸ್ಥಾನ ಬಿ. ಸಿ ರೋಡಿನಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

ಸ್ವಿಮ್ಮಿಂಗ್​ ಪೂಲ್​ ನೀರಿಗೆ ಬಿದ್ದು 4ನೇ ತರಗತಿ ವಿದ್ಯಾರ್ಥಿ ಸಾವು

ಉಡುಪಿ‌: ಸ್ವಿಮ್ಮಿಂಗ್​ ಫೂಲ್​ನಲ್ಲಿ ಮುಳುಗಿ 4ನೇ ತರಗತಿಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಸಮೀಪದ ಟಿನ್ ಟಾನ್ ಎನ್ವೆಂಚರ್ಸ್ ರೆಸಾರ್ಟ್​​ನಲ್ಲಿ ನಡೆದಿದೆ. ಉಡುಪಿ‌ಯ ಹೊಡೆ ಮೂಲದ ಮುಹಮ್ಮದ್ ಅರೀಝ್ ಮೃತ ವಿದ್ಯಾರ್ಥಿ. ದಾರುಸ್ಸಲಾಮ್...

ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣ : ನಿದ್ದೆಯಲ್ಲಿದ್ದ ಉಗ್ರರನ್ನು ಬಡಿದೆಬ್ಬಿಸಿದ ಎನ್ಐಎ

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಭರ್ಜರಿ ಕಾರ್ಯಾಚರಣೆ ನಡೆಸಿ, ಉಗ್ರರ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ರಾಮೇಶ್ವರಂ ಕೆಫೆ ಬಾಂಬರ್‌ ಗ್ಯಾಂಗ್ ಬಂಧಿಸಲು NIA ಭರ್ಜರಿ ಬಲೆ...

ಆಯತಪ್ಪಿ ಬಾವಿಗೆ‌ ಬಿದ್ದ ಮಹಿಳೆ… ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ

ಮಂಗಳೂರು: ಬಾವಿಯಿಂದ ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯೋರ್ವರನ್ನು ಗುರುವಾರ ಕದ್ರಿ ಅಗ್ನಿಶಾಮಕ ಠಾಣೆಯವರು ರಕ್ಷಿಸಿದ್ದಾರೆ ಬಿಕ್ಕರ್ನಕಟ್ಟೆ ಸಮೀಪದ ನಿವಾಸಿ ಟ್ರೆಸ್ಸಿ ಡಿಸೋಜಾ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಿಸಲ್ಪಟ್ಟ ಮಹಿಳೆ. ಸಂಜೆ 5 ಗಂಟೆ...