Tuesday, April 9, 2024

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್: ಸಾಮೂಹಿಕ ವಿವಾಹ ನೊಂದಾವಣೆಗೆ ಅರ್ಜಿ ಆಹ್ವಾನ

ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿದ್ದು 36ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ 12ನೇ ವರ್ಷದ ಸಾಮೂಹಿಕ ವಿವಾಹದ ಸಿದ್ಧತೆಯಲ್ಲಿದೆ. ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾ. 8ರಂದು ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು ಅರ್ಹ ವಧು-ವರರು ಫೆ. 25ರ ಒಳಗೆ ನೊಂದಾಯಿಸಬಹುದಾಗಿದೆ.
ಆಸಕ್ತ ವಧು-ವರರು ಸೂಕ್ತ ದಾಖಲೆ ಪತ್ರಗಳೊಂದಿಗೆ ಕ್ಲಬ್‌ನ ಕಛೇರಿಯಲ್ಲಿ ಸಂಪರ್ಕಿಸಬಹುದು. ವಿವಾಹವಾಗುವ ವಧುವಿಗೆ ಚಿನ್ನದ ತಾಳಿ ಹಾಗೂ ವಧು-ವರರಿಗೆ ಮಂಗಳ ವಸ್ತ್ರ ನೀಡಲಾಗುವುದು. ಹಾಗೂ ಸರಕಾರದ ವತಿಯಿಂದ ಪ್ರತೀ ಜೋಡಿಯ ಖಾತೆಗೆ ಐವತ್ತು ಸಾವಿರ ರೂ. ನೀಡಲಾಗುವುದು. ಕೇವಲ ಹತ್ತು ಜೋಡಿ ವಧು-ವರರಿಗೆ ಮಾತ್ರ ಅವಕಾಶವಿದ್ದು, ಅವಿಭಜಿತ ದ.ಕ. ಜಿಲ್ಲೆಯ ಅನಾಥ, ಬಡ ಕುಟುಂಬದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಸಂಚಾಲಕ ರಾಜೇಶ್ ಪಿ. ಬಂಗೇರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...