ತೊಕ್ಕೊಟ್ಟು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಕಾಪಿಕಾಡು ಎಂಬಲ್ಲಿ ನಡೆದಿದೆ. ಕಾಪಿಕಾಡು ನಿವಾಸಿ ರತನ್ ಕುಮಾರ್ (40)ಮೃತಪಟ್ಟವರು. 42 ರೂಟ್ ನಂಬರ್ ಬಸ್ ನಲ್ಲಿ ಕಂಡಕ್ಟರ್ ಆಗಿದ್ದ ರತನ್ ಕುಮಾರ್ ರೈಲು ಡಿಕ್ಕಿಯಾಗಿ ಮೃತಪಟ್ಟಿದ್ದಾರೆ. ರೈಲ್ವೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.