ಬಂಟ್ವಾಳ: ಪೌರತ್ವ ಕಾಯ್ದೆ ಯ ವಿರುದ್ಧ ಉಳ್ಳಾಲ ಶಾಸಕ ಯು.ಟಿ.ಖಾದರ್ ಅವರು ನೀಡಿರುವ ರಾಜ್ಯಕ್ಕೆ ಬೆಂಕಿ ಹಚ್ಚುವ ಪ್ರಚೋಧನಕಾರಿ ಹೇಳಿಕೆ ಸಮಾಜ ದ ಶಾಂತಿ ಕೆಡಿಸಿದೆ ಹಾಗಾಗಿ ಅವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಬೇಕು ಬಂಟ್ವಾಳ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದೆ.
ಶಾಸಕರ ಹೇಳಿಕೆಯಿಂದ ಅವರ ಆಪ್ತರು ಹಾಗೂ ಕಿಡಿಗೇಡಿಗಳು ಪ್ರತಿಭಟನೆಯ ನೆಪದಲ್ಲಿ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ, ಜೊತೆಗೆ ಪೊಲೀಸ್ ಇಲಾಖೆ ಗೂ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ ಎಂದು ಅವರು ಆರೋಪ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿ, ಸಾರ್ವಜನಿಕರ ಆಸ್ತಿಪಾಸ್ತಿಗಳನ್ನು ಹಾನಿಮಾಡಿ ನಷ್ಟ ಉಂಟು ಮಾಡಿರುವ ಬಗ್ಗೆ ಶಾಸಕ ಯು.ಟಿ.ಖಾದರ್ ಅವರನ್ನು ಬಂಧಿಸಿ, ಗಲಭೆಗೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಜೊತೆಗೆ ಗಲಭೆ ಮಾಡಿದವರಿಗೆ ಮುಖ್ಯಮಂತ್ರಿ ಹತ್ತು ಲಕ್ಷ ಪರಿಹಾರ ಘೋಷಣೆ ಮಾಡಿರುವುದು ಸರಿಯಲ್ಲ, ಇದರ ಪುನರ್ ವಿಮರ್ಶೆ ನಡೆಸಬೇಕು ಎಂದು ಅವರು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ರಾಜ್ಯ ಕಾರ್ಯಕಾರಣಿ ಸದಸ್ಯ ರವಿರಾಜ ಬಿಸಿರೋಡು, ಪುತ್ತೂರು ಜಿಲ್ಲಾಧ್ಯಕ್ಷ ಜಗದೀಶ್ ನೆತ್ತರಕೆರೆ , ತಾಲೂಕು ಅಧ್ಯಕ್ಷ ಚಂದ್ರ ಕಲಾಯಿ, ತಾಲೂಕು ಸಂಘಟನಾ ಕಾರ್ಯದರ್ಶಿ ಜಗದೀಶ್ ಕಾಮಾಜೆ, ಅಮ್ಟಾಡಿ ಮಂಡಲ ಅಧ್ಯಕ್ಷ ಹರೀಶ್ ತಲೆಂಬಿಲ, ಸದಸ್ಯ ರಾದ ತಿಲಕ್ ಅಮ್ಟಾಡಿ, ಶರಣ್ ಕಾಮಾಜೆ ಉಪಸ್ಥಿತರಿದ್ದರು.