ಬಂಟ್ವಾಳ: ಮುಂದಿನ ದಿನಗಳಲ್ಲಿ ಶಿಕ್ಷಕ ಸ್ನೇಹಿ ವರ್ಗಾವಣೆ ಕಾಯ್ದೆ ಅನುಷ್ಠಾನಕ್ಕೆ ತರಲು ಸರಕಾರ ಬದ್ಧ ವಿದೆ, ಮುಂದಿನ ಅಧಿವೇಶನದಲ್ಲಿ
ಪೆನ್ಸನ ಸ್ಕೀಮ್ ನ ಬಗ್ಗೆ ಪರಿಶೀಲಿಸಿ ಚರ್ಚಿಸಿ ಮುಂದಿನ ವಿಧಾನ ಸಭೆಯಲ್ಲಿ ಅನುಷ್ಠಾನಕ್ಕೆ ಸರಕಾರ ಚಿಂತನೆ ನಡೆಸಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದರು.
ಅವರು ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ವಾಮದಪದವು ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ, ಕಾಲೇಜು ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದ ಎಲ್ಲಾ ಕಡೆಗಳಿಂದ ಬಂದರೂ ನಾವು ಶಿಕ್ಷಣ ನೀಡಲು ಸ್ವಾಗತ ನೀಡುವ ಮನಸ್ಥಿತಿ ಗೆ ಅಭಿನಂದನೆ ಎಂದು ಅವರು ಹೇಳಿದರು.
ವಾಮದಪದವು ಕಾಲೇಜಿನಲ್ಲಿ ಪದವಿ ಪೂರ್ವಶಿಕ್ಷಣದ ಕೌಶಲ್ಯಾಭಿವೃದ್ದಿ ಶಿಕ್ಷಣಕ್ಕಾಗಿ ಕೌನ್ಸೆಂಲಿಗ್ ಕೇಂದ್ರ ಸ್ಥಾಪನೆಯ ಬಗ್ಗೆ ಗಂಭೀರವಾಗಿ ಯೋಚನೆ ಮಾಡುತ್ತೇವೆ ಎಂದರು.
ಪ್ರಾಕೃತಿಕ ವಿಕೋಪದಲ್ಲಿ ಹಾನಿಯಾದ ಶಾಲೆಗಳ ಅಭಿವೃದ್ಧಿ ಗಾಗಿ 3.90 ಲಕ್ಷ ಅನುದಾನ ಬಿಡುಗಡೆ ಮಾಡಿದ್ದೇವೆ.
ರಾಷ್ಟ್ರೀಯ ಶಿಕ್ಷಣ ನೀತಿಯಡಿಯ ರಾಜ್ಯದಲ್ಲಿ ಅದೇ ಮಾದರಿಯಲ್ಲಿ ಶಿಕ್ಷಣ ವ್ಯವಸ್ಥೆಗಾಗಿ ಯೋಚನೆಗಳು ಇವೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ್ದ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ಶಿಕ್ಷಣ ಇಲಾಖೆಗೆ ಉತ್ತಮ ಸಚಿವರನ್ನು ಪಡೆದಿದ್ದು, ದ.ಕ.ಜಿಲ್ಲೆಯ ಶಿಕ್ಷಣ ಸಂಸ್ಥೆ ಗಳಿಗೆ ಹೆಚ್ಚಿನ ಅನುದಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಂ.ಎಲ್.ಸಿ.ಬೋಜೆಗೌಡ ಅವರು ಮಾತನಾಡಿ ಪ್ರಮಾಣಿಕತೆ, ಶಿಸ್ತಿಗೆ ಇನ್ನೊಂದು ಹೆಸರು ಸುರೇಶ್ ಕುಮಾರ್, ಅವರು ಶಿಕ್ಷಣ ಸಚಿವ ರಾಗಿದ್ದು ನಮ್ಮೆಲ್ಲರ ಸೌಭಾಗ್ಯ ಎಂದು ಅವರು ಹೇಳಿದರು.
ನಂಬಿಕೆ ಗೆ ಅರ್ಹವಾಗಿ ಕೆಲಸ ಮಾಡುವ ಅತ್ಯುತ್ತಮ ವ್ಯಕ್ತಿತ್ವವುಳ್ಳ ಅವರು ಶಿಕ್ಷಣ ಕ್ಷೇತ್ರದ ಬಗ್ಗೆ ಎಲ್ಲಾ ವಿಚಾರಗಳನ್ನು ಆಳವಾಗಿ ಅಧ್ಯಯನ ಮಾಡಿದವರು.
ಶಿಕ್ಷಣ ಕ್ಷೇತ್ರದಲ್ಲಿ ರುವ ಸಮಸ್ಯೆ, ಬೇಡಿಕೆ ಗಳನ್ನು ಅತ್ಯಂತ ಉತ್ತಮವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.
ಆಚಾರ್ಯರಿಗೆ ಶಿಕ್ಷಕರಿಗೆ ಮೂಲಭೂತ ಸೌಕರ್ಯಗಳನ್ನು ವಿಶೇಷ ಒತ್ತುಕೊಟ್ಟು ಮಾಡಬೇಕಾಗಿದೆ.
ಮೂಲಭೂತ ಸೌಕರ್ಯಗಳ ನ್ನು ನೀಡಿದಾಗ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ, ಅದರ ಜೊತೆಗೆ ಬದುಕುವ ಶಿಕ್ಷಣ ನೀಡಬೇಕಾದ ಅನಿವಾರ್ಯ ಸನ್ನಿವೇಶ ಇದೆ ಎಂದು ಅವರು ಹೇಳಿದರು.
ಯಾವುದೇ ಮಸೂದೆಗಳನ್ನು ಜಾರಿ ಮಾಡುವ ಸಂದರ್ಭದಲ್ಲಿ ಸಂಬಂಧಿಸಿದ ವರ ಜೊತೆ ಚರ್ಚಿಸಿದರೆ ಅದು ಫಲಪ್ರದವಾಗುತ್ತದೆ ಎಂದು ಅವರು ಹೇಳಿದರು. ಸಂವಿಧಾನ ಬದ್ದವಾದ ಹಕ್ಕನ್ನು ಪಡೆಯಲು ನೀವು ಪ್ರತಿಭಟನೆಯ ಹಾದಿಹಿಡಿಯಬೇಕಾ ಎಂಬ ವಿಚಾರ ಬೇಸರವಾಗುತ್ತಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾದ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೂಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಜಿ.ಪಂ.ಸದಸ್ಯ ರಾದ ಎಂ.ತುಂಗಪ್ಪ ಬಂಗೇರ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಾಜಿ ವಿಧಾನಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ , ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷ ಯತೀಶ್ ಶೆಟ್ಟಿ, ಬಾಲಭವನ ಸೊಸೈಟಿ ಮಾಜಿ ಅಧ್ಯಕ್ಷೆ ಸುಲೋಚನ ಭಟ್ ,ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಾಲ್ಟರ್ ಡಿ.ಮೆಲ್ಲೋ, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಅಭಿಯಂತರ ತಾರಾನಾಥ ಸಾಲ್ಯಾನ್,ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಉಮೇಶ್, ಉದ್ಯಮಿ ಹಂಝ ಬಸ್ತಿಕೋಡಿ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ,
ಉಪಪ್ರಾಂಶುಪಾಲ ರಾಘವೇಂದ್ರ ಬಲ್ಲಾಳ್ , ಜನತಾಬಜಾರ್ .ನಿರ್ದೇಶಕ ಪುರುಷೋತ್ತಮ ಶೆಟ್ಟಿ ವಾಮದಪದವು ಹಾಗೂ ಕಾಲೇಜು ಉಪನ್ಯಾಸ ವೃಂದ, ಶಾಲಾ ಶಿಕ್ಷಕ ವೃಂದ, ವಿವಿಧ ಕಾಲೇಜುಗಳ ಉಪನ್ಯಾಸ ಕರುಗಳು, ಶಾಲಾಭಿವೃದ್ದಿ ಸಮಿತಿ ಸದಸ್ಯರು ಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಾಲೇಜು ಮತ್ತು ಪ್ರಾಚಾರ್ಯರ ಸಂಘದ ವತಿಯಿಂದ ಶಿಕ್ಷಣ ಸಚಿವ ಸುರೇಶ್ ಕುಮಾರ್
ಕಾಲೇಜಿನ ವತಿಯಿಂದ ಗುತ್ತಿಗೆ ದಾರ ಹರ್ಕಾಡಿ ಅವರನ್ನು ಸನ್ಮಾನಿಸಲಾಯಿತು.
ಎಸ್.ಎಸ್ ಎಲ್.ಸಿ.ಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರಾಚಾರ್ಯರ ಸಂಘದ ನೆರೆ ಸಂತ್ರಸ್ತ 62 ವಿದ್ಯಾರ್ಥಿಗಳಿಗೆ ಸುಮಾರು 6 ಲಕ್ಷ ರೂ ಸಹಾಯಧನದ ಚೆಕ್ ವಿತರಿಸಲಾಯಿತು.
ಪ್ರಾಂಶುಪಾಲ ಶ್ರೀದರ್ ಹೆಚ್.ಜಿ.ಸ್ವಾಗತಿಸಿ,
ಉಪನ್ಯಾಸಕ ರಾದೇಶ್ ತೊಳ್ಪಾಡಿ ಕಾರ್ಯಕ್ರಮ ನಿರೂಪಿಸಿದರು.