Thursday, April 11, 2024

ವೀರಕಂಬ ಶಾಲೆಗೆ ಬಂಟ್ವಾಳ ತಾ. ಪಂ. ನಿಂದ ಅನುದಾನ

ವೀರಕಂಬ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿನ ಶಾಲಾ ಕಚೇರಿಗೆ ಹಾಗೂ ಅಡುಗೆ ಕೋಣೆಯ ಜಗಲಿಗೆ ಬಂಟ್ವಾಳ ತಾ. ಪಂ. ನ ಸೇರ್ಪಡೆ ಮಾರ್ಪಾಡು ಅನುದಾನದಲ್ಲಿ ರೂ. 50,000 ವೆಚ್ಚದಲ್ಲಿ ಟೈಲ್ಸ್ ಅಳವಡಿಕೆ ಹಾಗೂ ಕಚೇರಿಗೆ ಪೈಂಟಿಂಗ್ ಕೆಲಸಕ್ಕಾಗಿ ಪೈಂಟ್ ನ್ನು ಕಂಟ್ರಾಕ್ಟರ್ ರಾದ ನಾಗರಾಜ್ ಉಚಿತವಾಗಿ ಒದಗಿಸಿದ್ದು ಪೈಂಟ್ ಮಾಡುವ ಕೆಲಸವನ್ನು ಪ್ರವೀಣ್ ಅವರು ಉಚಿತವಾಗಿ ಮಾಡಿಕೊಟ್ಟಿದ್ದಾರೆ. ಇದರ ಉದ್ಘಾಟನೆ ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾಧವ ಮಾವೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷ ಕಸ್ತೂರಿ ಪಂಜ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಲತಾ, ಉಪಾಧ್ಯಕ್ಷ  ವಿ. ಕೆ. ಅಬ್ಬಾಸ್, ಸದಸ್ಯರಾದ ರಾಮಚಂದ್ರ ಪ್ರಭು, ಜನಾರ್ಧನ ಪೂಜಾರಿ, ಜಯಂತಿ ಜನಾರ್ಧನ್, ಪದ್ಮಾವತಿ, ಜಯಂತಿ, ನಿವೃತ್ತ ಮುಖ್ಯ ಶಿಕ್ಷಕ ವಿಠಲ್ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸಂಜೀವ ಮೂಲ್ಯ ಮೊದಲಾದವರು ಉಪಸ್ಥಿತರಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...