Wednesday, April 10, 2024

ವಿಟ್ಲ: ಸ್ವಚ್ಛ ಭಾರತ ಮಿಷನ್ ಯೋಜನೆಯಡಿಯಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗೆ ಶಿಲಾನ್ಯಾಸ

ವಿಟ್ಲ: ದೇಶದ ಪ್ರಧಾನಿಮಂತ್ರಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಕಲ್ಪನೆಯಂತೆ ಸ್ವಚ್ಛ ಭಾರತ ಮಿಷನ್ ಯೋಜನೆ ಜಾರಿಗೆ ತಂದಿದ್ದಾರೆ. ಇದರ ಮೂಲಕ ಸ್ವಚ್ಛತೆಗೆ ವಿಶೇಷ ಅನುದಾನ ನೀಡಲಾಗುತ್ತಿದೆ. ಪರಿಸರ ಸ್ವಚ್ಛವಾಗಿದ್ದರೆ ಆರೋಗ್ಯ ಪೂರ್ಣ ಸಮಾಜ ನಿರ್ಮಾಣಗೊಳ್ಳುತ್ತದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ಶುಕ್ರವಾರ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಳಿಕೆ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸ್ವಚ್ಛಭಾರತ ಮಿಷನ್ ಯೋಜನೆಯಡಿಯಲ್ಲಿ 2.10 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ, ಮಾತನಾಡಿದರು. ವಿಟ್ಲ ಪಟ್ಟಣ ಪಂಚಾಯತ್ ಮೇಲ್ದರ್ಜೆಗೇರಿದ್ದು, ನಿರಂತರ ಅಭಿವೃದ್ಧಿ ಹೊಂದುತ್ತಿದೆ. ಇಲ್ಲಿಯ ಮೂಲಸೌಕರ್ಯದ ಉದ್ದೇಶಕ್ಕೆ ಅನುದಾನ ಬಿಡುಗಡೆಗೊಳಿಸಲು ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದೇನೆ. ವಿಟ್ಲ ತಾಲೂಕು ಕೇಂದ್ರ ಅಥವಾ ಪುರಸಭೆಯಾಗಿ ಮೇಲ್ದರ್ಜೆಗೇರುವ ಉದ್ದೇಶದಿಂದ ಕಾಯಕಲ್ಪ ಇಟ್ಟುಕೊಳ್ಳಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಕಾರ್ಯಾಲಯಕ್ಕೆ ಅನುದಾನ ಒದಗಿಸುವ ಮೂಲಕ ಅಭಿವೃದ್ಧಿಪಡಿಸಲಾಗುವುದು ಎಂದರು.
2.10 ಕೋಟಿ ಅನುದಾನದಲ್ಲಿ ಸಿವಿಲ್ ಕಾಮಗಾರಿ ಹಾಗೂ 1.17 ಕೋಟಿ ಅನುದಾನದಲ್ಲಿ ವಾಹನ ಹಾಗೂ ಯಂತ್ರೋಪಕರಣ ಖರೀದಿಸಲಾಗುತ್ತದೆ. ಸಿವಿಲ್ ಕಾಮಗಾರಿಯಲ್ಲಿ ವಿಂಡ್ರೋ ಪ್ಲಾಟ್ ಫಾರಂ ರಚನೆ, ಸ್ಯಾನಿಟರಿ ಲ್ಯಾಂಡ್‌ಫಿಲ್ ರಚನೆ, ಆವರಣಗೋಡೆ, ತ್ಯಾಜ್ಯ ನೀರಿನ ಸಂಸ್ಕರಣೆ ಹಾಗೂ ೧.೧೭ ಕೋಟಿ ರೂ. ಅನುದಾನದಲ್ಲಿ ಪುಶ್‌ಕಾರ್ಟ್, ಬೇಲಿಂಗ್ ಯೂನಿಟ್, ಸ್ಕ್ರೀನಿಂಗ್ ಟ್ರೋಮಲ್, ಜೆಸಿಬಿ, ಟಾಟಾ ವಾಹನ, ಆಟೋ ಟಿಪ್ಪರ್, ಟ್ರಾಕ್ಟರ್, ಟ್ರೈಲರ್‌ಗಳು ಖರೀದಿಸುವ ಮೂಲಕ ಕಾಮಗಾರಿ ನಡೆಯಲಿದೆ ಎಂದು ಎಂಜಿನಿಯರ್ ಮಾಹಿತಿ ನೀಡಿದರು.
ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಮಯಂತಿ, ಉಪಾಧ್ಯಕ್ಷ ಜಯಂತ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ಕೃಷ್ಣಪ್ಪ, ಸದಸ್ಯರಾದ ಅರುಣ್ ಎಂ. ವಿಟ್ಲ, ಅಶೋಕ್ ಕುಮಾರ್ ಶೆಟ್ಟಿ, ರಾಮದಾಸ್ ಶೆಣೈ, ಶ್ರೀಕೃಷ್ಣ, ರವಿಪ್ರಕಾಶ್, ಮಂಜುನಾಥ ಕಲ್ಲಕಟ್ಟ, ಲೋಕನಾಥ ಶೆಟ್ಟಿ ಕೊಲ್ಯ, ಚಂದ್ರಕಾಂತಿ, ಲತಾವೇಣಿ, ಇಂದಿತಾ ಅಡ್ಯಾಳಿ, ಸುನೀತಾ ಕೋಟ್ಯಾನ್, ಮುಖ್ಯಾಧಿಕಾರಿ ಮಾಲಿನಿ, ಕಂದಾಯ ನಿರೀಕ್ಷಕ ಪಕೀರ ಮೂಲ್ಯ, ಇಂಜಿನಿಯರ್ ಶ್ರೀಧರ, ವಿಟ್ಲ ನಗರ ಬಿಜೆಪಿ ಅಧ್ಯಕ್ಷ ಮೋಹನದಾಸ ಉಕ್ಕುಡ, ಪ್ರಧಾನ ಕಾರ್ಯದರ್ಶಿ ಉದಯ ಆಲಂಗಾರು, ಜತೆ ಕಾರ್ಯದರ್ಶಿ ಜಗದೀಶ ಪಾಣೆಮಜಲು ಉಪಸ್ಥಿತರಿದ್ದರು.

More from the blog

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...